LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ವಿದ್ಯಾರ್ಥಿಗೆ ಥಳಿಸಿ ಕೊಲೆ ಮಾಡಿರುವುದು ಕಂಡನೆ ಕೊಲೆ

ಬೆಂಗಳೂರು : ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಟ್ ಮೂಲಕ ಅಭಯ ಹಾಸನ ನೀಡಿದ್ದಾರೆ.

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ.

ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು.
ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ.

ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ.

ಬಾಲ್ಯದಲ್ಲೇ ದ್ವೇಷ, ಹಿಂಸೆ, ಅಪರಾಧ ಕೃತ್ಯಗಳ ದುರ್ಬುದ್ದಿ ಬೆಳೆಸಿಕೊಳ್ಳುವುದು ಅತ್ಯಂತ ಅಪಾಯಕಾರಿ. ಇಂತಹ ಮನಸ್ಥಿತಿಯಿರುವವರು ದುಶ್ಚಟಗಳಿಗೆ ದಾಸರಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಪೋಷಕರು ಸಹ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು, ಮಕ್ಕಳು ಹಾದಿ ತಪ್ಪಿದ್ದರೆ ತಿದ್ದಿ ಬುದ್ದಿ ಹೇಳಬೇಕು.
ಶಾಲೆಯ ಸುತ್ತಮುತ್ತ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆಯಬೇಕು.

ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬವನ್ನು ಸಂತೈಸುವ ಉದ್ದೇಶದಿಂದ ಮೃತನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ, ಶಾಂತಿ - ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ