ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿದ್ದವರಿಗೆ ಶಾಕ್.!
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಾವಿರಾರು ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅವರನ್ನು ಖಾಯಂಗೊಳಿಸಲು ಸದ್ಯದ ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶಾಸಕ ಐಹೊಳೆ ದುರ್ಯೋಧನ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಿಎಂ ರಾಜ್ಯದ ವಿವಿಧ ಇಲಾಖೆಗಳಲ್ಲಿ ಸದ್ಯ 96,844 ನೌಕರರು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ..ಗುತ್ತಿಗೆ ನೌಕರರನ್ನು ಸರ್ಕಾರಿ ಸೇವೆಯಲ್ಲಿ ಖಾಯಂಗೊಳಿಸಲು ಈಗಿರುವ ನಿಯಮಗಳಲ್ಲಿ ಯಾವುದೇ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಈ ನೌಕರರಿಗೆ ಕಾರ್ಮಿಕ ಇಲಾಖೆಯ ನಿಯಮದಂತೆ ಕನಿಷ್ಠ ವೇತನ ಮತ್ತು ತುಟ್ಟಿಭತ್ಯೆಯನ್ನು ನೀಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
ಹಲವು ವರ್ಷಗಳಿಂದ ಸೇವೆಯಲ್ಲಿರುವ ತಮಗೆ ಖಾಯಂ ಆತಿ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದ ಸುಮಾರು ಒಂದು ಲಕ್ಷದಷ್ಟು ಹೊರಗುತ್ತಿಗೆ ನೌಕರರಿಗೆ ಈ ಹೇಳಿಕೆಯು ಭಾರಿ ನಿರಾಸೆ ಮೂಡಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.