LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಒಳ ಮೀಸಲಾತಿ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ.!

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇಕಡ 15 ರಷ್ಟು ಮೀಸಲಾತಿಯಲ್ಲಿ ವಿವಿಧ ಗುಂಪುಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಕುರಿತಂತೆ ನಿರ್ಧಾರ ಕೈಗೊಳ್ಳಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ವಿಶೇಷ ಸಂಪುಟ ಸಭೆ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಒಳ ಮಿಸಲಾತಿ ಜಾರಿಗೆ ಬಗ್ಗೆ ನಿರ್ಣಾಯಕ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಏಪ್ರಿಲ್ 16ರಂದು ನಡೆದ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಚರ್ಚೆ ನಡೆದಿತ್ತು. ಈ ವೇಳೆ ನ್ಯಾಯಾಲಯ ಮೀಸಲಾತಿಯನ್ನು ಶೇ. 56ರ ಬದಲಿಗೆ ಶೇಕಡ 50ಕ್ಕೆ ಸೀಮಿತಗೊಳಿಸಿದೆ. ಹೀಗಾಗಿ ಸಮುದಾಯಗಳಿಗೆ ಶೇಕಡ 17ರ ಬದಲಿಗೆ ಶೇಕಡ 15ರಷ್ಟು ಮೀಸಲಾತಿ ಮಾತ್ರ ನೀಡಬಹುದು. ಹೀಗಾಗಿ ಈ ಹಿಂದೆ ಕೈಗೊಂಡಿದ್ದ ಒಳ ಮೀಸಲಾತಿ ವರ್ಗಿಕರಣ ಪರಿಷ್ಕರಿಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗಿತ್ತು.

ಈ ತಾಂತ್ರಿಕ ಸಮಿತಿಯು ಪರಿಶಿಷ್ಟ ಜಾತಿಯ ಎಡಗೈ ಸಂಬಂಧಿಸಿದ ಜಾತಿಗಳು ಎ ಗುಂಪಿಗೆ ಶೇಕಡ 5.3, ಬಲಗೈ ಸಂಬಂಧಿಸಿದ ಜಾತಿಗಳು ಬಿ ಗುಂಪಿಗೆ ಶೇಕಡ 5.3, ಅಲೆಮಾರಿ, ಅರೆ ಅಲೆಮಾರಿ, ಸ್ಪೃಶ್ಯ ಜಾತಿಗಳು ಸಿ ಗುಂಪಿಗೆ ಶೇಕಡ 4.4 ರಷ್ಟು ಒಳ ಮೀಸಲಾತಿ ನಿಗದಿ ಮಾಡಬಹುದು ಎನ್ನುವ ಬಗ್ಗೆ ವರದಿಯಲ್ಲಿ ಸಲಹೆ ನೀಡಲಿದೆ ಎಂದು ಹೇಳಲಾಗಿದೆ.

ಇದರೊಂದಿಗೆ ಮೀಸಲಾತಿ ಮರು ವಿಂಗಡಣೆ ಮಾಡಿ ಪೂರಕವಾಗಿ ರೋಸ್ಟರ್ ಬಿಂದು ಗುರುತಿಸಿ ಕೊಡಲಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ ಅವಕಾಶ ವಂಚಿತ ಉಪ ಜಾತಿಗಳಿಗೆ ಅವಕಾಶ ಕಲ್ಪಿಸಬೇಕೆಂಬುದು ಮೂರು ದಶಕಗಳು ಹೋರಾಟವಾಗಿದ್ದು, ಇಂದಿನ ಸಂಪುಟ ಸಭೆ ಕೈಗೊಳ್ಳುವ ಮಹತ್ವದ ನಿರ್ಧಾರದ ಕುರಿತು ಕುತೂಹಲ ಮೂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026