LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯರ ಮಟದಲ್ಲಿ"ಲೋಕ ಕಲ್ಯಾಣಕ್ಕಾಗಿ ವಿಶೇಷ ಪೂಜೆ ಪ್ರಾರ್ಥನೆ

ಬೆಂಗಳೂರು: "ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದ ಪ್ರಯುಕ್ತ "ಲೋಕ ಕಲ್ಯಾಣ"ಕ್ಕಾಗಿ ವಿಶೇಷ ಪೂಜೆ ಪ್ರಾರ್ಥನೆಯನ್ನು ಮಂತ್ರಾಲಯ ಶ್ರೀ ಸುಬುಧೇಂದ್ರತೀರ್ಥ ಶ್ರೀಗಳಿಂದ ನೆರವೇರಲಾಯಿತು.

ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ತಮ್ಮ ಅಮೃತ ಹಸ್ತದಿಂದ "ಲೋಕಕಲ್ಯಾಣಕ್ಕಾಗಿ" ಶ್ರೀಮನ್ಮೂಲರಾಮಚಂದ್ರದೇವರ ಸಂಸ್ಥಾನ ಪೂಜೆಯೊಂದಿಗೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮಹಾ ಮಂಗಳಾರತಿಯನ್ನು ನೆರವೇರಿಸಿದರು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ತದನಂತರದಲ್ಲಿ ಪರಮಪೂಜ್ಯ ಶ್ರೀಪಾದಂಗಳವರು ಆಶೀರ್ವಚನವನ್ನು ನೀಡುತ್ತಾ ಪ್ರತಿಯೊಬ್ಬ ಭಕ್ತರು ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತಿಯಿಂದ ಜಪಿಸಿ ಪ್ರಾರ್ಥಿಸಿ, ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹವನ್ನು ಪಡೆದುಕೊಳ್ಳಿ ಎಂಬುದಾಗಿ ಭಕ್ತರಿಗೆ ಅನುಗ್ರಹ ಸಂದೇಶದೊಂದಿಗೆ ಸಾವಿರಾರು ಭಕ್ತರಿಗೆ ಫಲ ಮಂತ್ರಾಕ್ಷತೆ ಶೇಷ ವಸ್ತ್ರ ಅನುಗ್ರಹಿಸಿ ಮಂತ್ರಾಲಯ ಕ್ಷೇತ್ರಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಗುರುಗಳ ಪೂರ್ವಾಶ್ರಮದ ತಂದೆಯವರಾದ ಪಂಡಿತ ಕೇಸರಿ ರಾಜಾ. ಎಸ್. ಗಿರಿ ಆಚಾರ್ಯರು ಹಾಗೂ ರಾಜಾ. ಕೆ ವಾದಿಂದ್ರಾಚಾರ್ಯರು ಮತ್ತು ಭಕ್ತರು ಈ ಪೂಜಾ ವೈಭವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ