LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆಗೆ ಶರಣು

ಕೊಡಗು; ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ.

ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ನಿನ್ನೆ ಸಿಹಿ ಹಂಚಿದ್ದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಪೊನ್ನಂಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ವಿಷಯಗಳಲ್ಲಿ ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026