LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಹಪಾಠಿಗಳಿಂದ ರ‍್ಯಾಗಿಂಗ್‌- ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ : ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.

ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ  ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳಾದ ವರ್ಷಾ ಹಾಗೂ ಪ್ರದೀಪ್ ಸೇರಿ ಮೂವರು ಅಂಜಲಿಗೆ ರ‍್ಯಾಗಿಂಗ್ ಮಾಡಿದ್ದರು. ಇದರಿಂದ ಮಾನಸಿಕ ಕಿರುಕುಳ ಅನುಭವಿಸಿದ್ದ ಅಂಜಲಿ, ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಕಾರಣ ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಅವರು ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆಯೇ ಮಾತನಾಡಿ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಸೇಯಿಂಗ್ ಗುಡ್ ಬೈ ಎಂದು ಸಹಿ ಹಾಕಿ ಅಂಜಲಿ ಡೆತ್‌ನೋಟ್ ಬರೆದಿದ್ದಾಳೆ.

ಈ ಸಂಬಂಧ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026