ಬೆಳಗಾವಿ: ಬೆಳಗಾವಿಯ ಎಸ್.ಎಸ್.ಎಸ್ ಸಮಿತಿಯ ಮಹಾವೀರ ಪಿ.ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯ, ಸ್ನಾತಕೋತ್ತರ (ಎಮ್.ಕಾಂ) ವಿಭಾಗದಲ್ಲಿ 2024-25 ಶೈಕ್ಷಣಿಕ ಸಾಲಿನ ಎಮ್.ಕಾಂ ವಿಭಾಗದ ವಿದ್ಯಾರ್ಥಿನಿ ಕುಮಾರಿ. ಪ್ರತೀಭಾ ಎನ್. ಹರಾಳೆ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ದ್ವಿತಿಯ ರ್ಯಾಂಕ ಪಡೆದಿರುತ್ತಾರೆ.
ಅವರ ಶ್ರಮ, ಶಿಸ್ತು ಮತ್ತು ಸಂಕಲ್ಪಕ್ಕೆ ತಕ್ಕ ಪ್ರತಿಫಲ ಈ ನಿಮ್ಮ ರ್ಯಾಂಕ ನಮ್ಮೆಲ್ಲರ ಹೆಮ್ಮೆ. ಅವರ ಸಾಧನೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದೆ ಮತ್ತು ಇತರ ವಿದ್ಯಾರ್ಥಿಗಳಿಗೆ ದೊಡ್ಡ ಪ್ರೇರಣೆಯಾಗಿದೆ ಎಂದು ಸಮಿತಿಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು,ಬೋದಕ ಹಾಗೂ ಬೋದಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.