ಭಾರತೀಯರಿಗೆ ಪುಳಕ : ಚಂದಿರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿ !
ದೆಹಲಿ :ವಿಶ್ವಾದ್ಯಂತ ಇರುವ ಭಾರತೀಯರ ಬಹುದಿನಗಳ ಕನಸು ಕೊನೆಗೂ ಈಡೇರಿತು.
ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಅಡಿ ಇಟ್ಟ ವಿಕ್ರಮ್ ಲ್ಯಾಂಡರ್ ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಘೋಷಿಸಿದೆ.
ಈ ಮೂಲಕ ವಿಕ್ರಮ್ ಲ್ಯಾಂಡರ್, ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆಗಿದೆ.
ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಗೆ ಇಳಿಯಿತು. ಈ ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಕಣ್ತುಂಬಿಕೊಂಡರು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಗುರುವಾಗಿದೆ. ಭಾರತದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸುವ ಮೂಲಕ ಇಸ್ರೋ ಮೈಲಿಗಲ್ಲು ನಿರ್ಮಿಸಿದೆ. ಈವರೆಗೂ ವಿಶ್ವದ ಯಾವುದೇ ದೇಶವೂ ಭೇದಿಸದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ವಿಜ್ಞಾನಿಗಳು ಲ್ಯಾಂಡರ್ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
5.44ಕ್ಕೆ ಇಸ್ರೋ ವಿಕ್ರಮ್ ಲ್ಯಾಂಡರ್ ಇಳಿಕೆ ಪ್ರಕ್ರಿಯೆ ಆರಂಭಿಸಿತು. ಹಂತ ಹಂತವಾಗಿ ವೇಗ ತಗ್ಗಿಸಿದ ಇಸ್ರೋ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿ ಇತಿಹಾಸ ರಚಿಸಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ವಿಶ್ವದ ಮೊದಲ ದೇಶ ಎಂಬ ದಾಖಲೆಗೆ ಭಾರತ ಪಾತ್ರವಾಗಿದೆ. ಜತೆಗೆ ಚಂದ್ರನ ಮೇಲೆ ಯಶಸ್ವಿಯಾಗಿ ನೌಕೆ ಇಳಿಸಿ ಅಧ್ಯಯನ ಕೈಗೊಂಡ ವಿಶ್ವದ 4ನೇ ರಾಷ್ಟ್ರ ಎಂಬ ಹೊಸ ಇತಿಹಾಸವನ್ನು ಭಾರತ ಹಾಗೂ ಇಸ್ರೋ ಬರೆದಿದೆ. ಈವರೆಗೆ ಅಮೆರಿಕ, ಚೀನಾ ಹಾಗೂ ಸೋವಿಯತ್ ಒಕ್ಕೂಟಗಳು ಈ ಮಾತ್ರ ಈ ಸಾಧನೆ ಮಾಡಿವೆ.
ಕೊನೆಯ 17 ನಿಮಿಷಗಳಲ್ಲಿ ಲ್ಯಾಂಡರ್ ಸೂಕ್ತ ಸಮಯ ಹಾಗೂ ಎತ್ತರ ನೋಡಿಕೊಂಡು, ಸೂಕ್ತ ಪ್ರಮಾಣದ ಇಂಧನ ಬಳಸಿಕೊಂಡು, ಚಂದ್ರನ ನೆಲವನ್ನು ಪರಿಶೀಲಿಸಿ ಸ್ವಯಂಚಾಲಿತವಾಗಿ ಎಂಜಿನ್ ಚಾಲೂ ಮಾಡಿಕೊಂಡು ಇಳಿಯುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಯಾವುದೇ ಅಡ್ಡಿ ಅಥವಾ ಪರ್ವತ ಅಥವಾ ಕಂದಕ ಇಲ್ಲದ ಜಾಗವನ್ನು ಪರಿಶೀಲಿಸಿ ಲ್ಯಾಂಡರ್‌ನ್ನು ಯಶಸ್ವಿಯಾಗಿ ಇಳಿಸಲಾಗಿದೆ.
ಚಂದ್ರಯಾನ 3 ಯಶಸ್ವಿಯಾಗಿ ದೇಶದ ಮೂಲೆ ಮೂಲೆಯಲ್ಲಿ ಪೂಜೆ, ಹೋಮ ಹವನಗಳು ನಡೆದಿತ್ತು. ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. 140 ಕೋಟಿ ಭಾರತೀಯರು ಚಂದ್ರಯಾನ ಯಶಸ್ವಿಯಾಗಿ ಪ್ರಾರ್ಥಿಸಿದ್ದರು. ಇದೀಗ ಎಲ್ಲರ ಪ್ರಾರ್ಥನೆ ಕೈಗೂಡಿದೆ. 41 ದಿನದ ನೌಕೆ ಪ್ರಯಾಣ ಇದೀಗ ಚಂದ್ರನ ಮೇಲೆ ಲ್ಯಾಂಡರ್ ಇಳಿಯುವ ಮೂಲಕ ಸಂಪನ್ನಗೊಂಡಿದೆ. ಇನ್ನು ಅಧ್ಯಯನ, ಸಂಶೋಧನೆಗಳು ಆರಂಭಗೊಳ್ಳಲಿದೆ.
ಜುಲೈ 14 ರಂದು ಶ್ರೀಹರಿಕೋಟಾದಿಂದ ವಿಕ್ರಮ್ ಲ್ಯಾಂಡರ್ ಹೊತ್ತ ಉಪಗ್ರಹ ಉಡಾವಣೆ ಮಾಡಲಾಗಿತ್ತು. ಬರೋಬ್ಬರಿ 3.84 ಲಕ್ಷ ಕಿಮೀ ದೂರವನ್ನು ಕಳೆದ 41 ದಿನಗಳಲ್ಲಿ ಕ್ರಮಿಸಿ ಇದೀಗ ಚಂದ್ರನ ಮೇಲೆ ಲ್ಯಾಂಡ್ ಆಗಿದೆ. ಚಂದ್ರನ ಮೇಲೆ ಲ್ಯಾಂಡ್ ಆಗಿರುವ ವಿಕ್ರಮ ಲ್ಯಾಂಡರ್ 1758 ಕೆ.ಜಿ.ತೂಕ ಹೊಂದಿದೆ. ಈ ಲ್ಯಾಂಡರ್‌ನಲ್ಲಿರುವ ಪ್ರಜ್ಞಾನ್ ರೋವರ್ 26 ಕೆಜಿ ತೂಕ ಹೊಂದಿದ್ದು, 14 ದಿನ ಚಂದ್ರನ ಮೇಲೆ ಓಡಾಡಿ ಅಧ್ಯಯನ ಮಾಡಲಿದೆ. ಲ್ಯಾಂಡರ್, ರೋವರಲ್ಲಿರುವ 5 ಉಪಕರಣ ಬಳಸಿ ಚಂದ್ರನ ಅಧ್ಯಯನವನ್ನು ಇಸ್ರೋ ಮಾಡಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.