LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೆಕ್ಕಿ ಆತ್ಮಹತ್ಯೆ; ಪತ್ನಿ ಸೇರಿ ಮೂವರು ಪೊಲೀಸರ ಬಲೆಗೆ

ಬೆಂಗಳೂರು: ಬೆಂಗಳೂರಿನ ಮಾರತ್ತ ಹಳ್ಳಿಯಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ, ಆಕೆಯ ತಾಯಿ ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಭಾನುವಾರ(ಡಿ15) ಬಂಧಿಸಿದ್ದಾರೆ.

34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. 24 ಪುಟಗಳ ಡೇತ್ ನೋಟ್ ಮತ್ತು ವೀಡಿಯೊವನ್ನು ಹಂಚಿಕೊಂಡು ತನ್ನ ಪತ್ನಿ ಮತ್ತು ಆಕೆಯ ಕುಟುಂಬದ ಕಿರುಕುಳ ನೀಡಿದ್ದು, ತಾಳಲಾರದೆ ಈ ರೀತಿ ಮಾಡುತ್ತಿದ್ದೇನೆ ಎಂದು ಆರೋಪಿಸಿದ್ದರು.

ಸುಭಾಷ್ ಅವರ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮ್‌ನಲ್ಲಿ ಬಂಧಿಸಲಾಗಿದ್ದು, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಪ್ರಯಾಗ್‌ರಾಜ್‌ನಲ್ಲಿ ಬಂಧಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ನಿಕಿತಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ ನಂತರ ಬಂಧಿಸಲಾಗಿದೆ.

ಅಲಹಾಬಾದ್‌ ಹೈಕೋರ್ಟ್ ಮೆಟ್ಟಿಲೇರಿದ್ದರು
ಅತುಲ್‌ ಸುಭಾಷ್‌ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುಭಾಷ್‌ ವಿಚ್ಛೇದಿತ ಪತ್ನಿ ನಿಖಿತಾ ಸಿಂಘಾನಿಯಾ ಮತ್ತವರ ಕುಟುಂಬ ಶನಿವಾರ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿಖಿತಾ ಸಿಂಘಾನಿಯಾ ಜತೆಗೆ ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್‌ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್‌ ಸಿಂಘಾನಿಯಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವಾರವಷ್ಟೇ ಬೆಂಗಳೂರು ಪೊಲೀಸರು ನಿಖಿತಾ ವಿರುದ್ಧ ಸಮನ್ಸ್‌ ಜಾರಿಗೊಳಿಸಿ, ಸೋಮ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು

 










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ