ಬೀಜಿಂಗ್: Chinaದ ಹುನಾನ್ (Hunan) ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿ 21 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ ಸುಮಾರಿಗೆ ಈ ದುರಂತ ನಡೆದಿದ್ದು, 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯ ಕುರಿತು Xi Jinping ತನಿಖೆಗೆ ಆದೇಶಿಸಿದ್ದಾರೆ.
ಮತ್ತೊಂದೆಡೆ United Arab Emiratesನಲ್ಲಿ ತೈಲ ಸಂಗ್ರಹಣಾ ಕೇಂದ್ರದ ಮೇಲೆ ನಡೆದ ಡ್ರೋನ್ ದಾಳಿಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ. ಫುಜೈರಾ ಪೆಟ್ರೋಲಿಯಂ ಇಂಡಸ್ಟ್ರೀಸ್ ವಲಯದಲ್ಲಿ ಈ ಘಟನೆ ನಡೆದಿದ್ದು, ಮೂವರು ಭಾರತೀಯ ನಾಗರಿಕರು ಗಾಯಗೊಂಡಿದ್ದಾರೆ. Iranದಿಂದ ಬಂದ ಡ್ರೋನ್ ದಾಳಿಯಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.