LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಯಲ್ಲಿ ಕಸ ಹಾಕಿದ ವಾಹನ ಪತ್ತೆ ಹಚ್ಚಿ ದಂಡ

ಬೆಂಗಳೂರು : ರಸ್ತೆ ಬದಿ ಕಸ ಹಾಕಿದ ವಾಹನ ಪತ್ತೆ ಹಚ್ಚಿ, ದಂಡ ವಿಧಿಸಿ ಬೆಂಗಳೂರು ಉತ್ತರ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸರ್ವಜ್ಞನಗರ ವಿಭಾಗದ ವಾರ್ಡ್ 29 ರ ಕಲ್ಯಾಣ ನಗರದಲ್ಲಿ ಇಂದು ರಸ್ತೆ ಬದಿ ನಾಗರಿಕರೊಬ್ಬರು ವಾಹನದಲ್ಲಿ ಬಂದು ಕಸ ಸುರಿಯುತ್ತಿರುವ ದೃಶ್ಯವನ್ನು ನೆರೆಹೊರೆಯ ನಾಗರಿಕರೊಬ್ಬರು ವಿಡಿಯೋ ಚಿತ್ರೀಕರಿಸಿ ನಗರ ಪಾಲಿಕೆಗೆ ಕಳುಹಿಸಿರುವುದನ್ನು ಗಮನಿಸಿದ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ರವರು ವಾಹನದ ಮಾಹಿತಿಯನ್ನು ತಕ್ಷಣ ಪತ್ತೆ ಹಚ್ಚಿ ಸದರಿ ವಾಹನದ ಮಾಲೀಕರಿಗೆ ದಂಡ ವಿಧಿಸಿ, ಮತ್ತೊಮ್ಮೆ ಈ ಕಾರ್ಯ ಮರುಕಳಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ.

*ವಾಹನ ಮಾಲೀಕರಿಗೆ 5,000 ದಂಡ*

ಆಯುಕ್ತರವರ ಸೂಚನೆ ಮೇರೆಗೆ ಸರ್ವಜ್ಞ ನಗರ ವಿಭಾಗದ ಘನತ್ಯಾಜ್ಯ ನಿರ್ವಹಣೆ ತಂಡವು ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ವಾಹನ ಮಾಲೀಕರ ವಿಳಾಸವಾದ ನಂಬರ್ 45, 3ನೇ ಬಿ ಮುಖ್ಯ ರಸ್ತೆ, ನಾಲ್ಕನೇ ಕ್ರಾಸ್ ಕಲ್ಯಾಣ ನಗರ ಕ್ಕೆ ಭೇಟಿ ನೀಡಿ, ವಾಹನ ಮಾಲೀಕರನ್ನು ಪತ್ತೆ ಹಚ್ಚಿ, ರುಾ. 5,000 ದಂಡ ವಿಧಿಸಿ, ಮತ್ತೊಮ್ಮೆ ಈ ರೀತಿ ಕೃತ್ಯ ಮರುಕಳಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುತ್ತಾರೆ.

ನಗರದ ಸೌಂದರ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡಲು ನಾಗರಿಕರು ನಗರ ಪಾಲಿಕೆಯೊಂದಿಗೆ ಕೈಜೋಡಿಸಲು ನಗರ ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ