LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೊಸೆಗೆ ಮಕ್ಕಳಾಗಲಿಲ್ಲವೆಂದು ಪತಿಯ ಪೋಷಕರಿಂದ ಮಹಿಳೆಯ ಭೀಕರ ಕೊಲೆ

ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ.



ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದಿನಾಂಕ 17.05.2025 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿಗಳಾದ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಇವರು ತಮ್ಮ ಮೋಟಾರ್ ಸೈಕಲ್ ಮೇಲೆ ಅವರ ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತು. ಹೋಗಿದ್ದಾಳೆ ಎಂಬ ಅಪಘಾತದ ದೃಶ್ಯ ಸೃಷ್ಟಿಸಿದ್ದಾರೆ.

ಆದರೆ ಪೊಲೀಸ್‌ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಕೊಲೆ ಎಸಗಲಾಗಿದ್ದು, ಇದರಲ್ಲಿ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಹೊನಕಾಂಡೆ ಕೈವಾಡ ಕಂಡುಬಂದಿದ್ದರಿಂದ ಮತ್ತು ಕೊಲೆಗೆ ಆರೋಪಿತರ ಮಗ ಸಂತೋಷ್ ಬೆಂಬಲ ನೀಡಿದ್ದು ತಿಳಿದು ಬಂದಿದೆ. ಅಥಣಿ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026