ಅಥಣಿ : ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮಾಳು ಯಮಗಾರ(35) ಎಂಬ ವ್ಯಕ್ತಿ ಭೀಕರ ಕೊಲೆಯಾಗಿದ್ದಾನೆ. ದುಷ್ಕರ್ಮಿಗಳು ಕಲ್ಲಿನಿಂದ ತಲೆ ಜಜ್ಜಿ ಕೊಲೆಗೆ ಯತ್ನಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಅಥಣಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತಲೆಗೆ ಜೋರಾಗಿ ಪೆಟ್ಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.
ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.