LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿನಗರ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಬೆಲೆ ಏರಿಕೆ ಅಭಿಯಾನ

ಬೆಂಗಳೂರು: ಆಮ್ ಆದ್ಮಿ ಪಕ್ಷದಿಂದ ಸತತ 10 ದಿವಸಗಳಿಂದ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ನಡೆಯುತ್ತಿರುವ ತುಘಲಕ್ ತೆರಿಗೆ ದರೋಡೆ ಅಭಿಯಾನವು  ನಗರದ ಶಾಂತಿನಗರ ವಿಧಾನಸಭಾ ಕ್ಷೇತ್ರದ ಅನೇಕ ಕಡೆಗಳಲ್ಲಿ ನಡೆಯಿತು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ನೇತೃತ್ವದಲ್ಲಿ ನಡೆದ ಅಭಿಯಾನವು ಬ್ರಿಗೇಡ್ ರಸ್ತೆ, ನೀಲಸಂದ್ರ , ವನ್ನಾರ್ ಪೇಟೆ, ಎಲ್.ಅರ್.ನಗರ, ದೊಮ್ಮಲೂರು ಇನ್ನಿತರ ಕಡೆ ಜನನಿಬಿಡ ಪ್ರದೇಶಗಳಲ್ಲಿ ಅಭಿಯಾನವನ್ನು ನಡೆಸಲಾಯಿತು. ಕ್ಷೇತ್ರದ ಸಾವಿರಾರು ಕಾರ್ಯಕರ್ತರುಗಳಿಗೆ ಬೆಲೆ ಏರಿಕೆ ಕರಪತ್ರವನ್ನು ನೀಡುವ ಮೂಲಕ ಪಕ್ಷದ ಜನಾಂದೋಲನದಲ್ಲಿ ಸಕ್ರಿಯಗೊಳ್ಳಬೇಕೆಂದು ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ವಿನಂತಿಸಿಕೊಂಡರು.

ಕ್ಷೇತ್ರದಲ್ಲಿ ಹಾಗೂ ವಾರ್ಡ್ಗಳಲ್ಲಿ ಎಎಪಿ ಕಾರ್ಯಕರ್ತರು ಸಾರ್ವಜನಿಕರನ್ನು ಬೆಳೆಯುವುದಕ್ಕೆ ಕೇಳುವ ಮೂಲಕ ವಿನೂತನವಾದಂತಹ ಅಭಿಯಾನ ಮಾಡಿದರೆ. ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವಂತ ಬೆಲೆ ಏರಿಕೆ ಬಗ್ಗೆ ತೆಗೆದುಕೊಳ್ಳುವಂತಹ ವಿನೂತನ ಪ್ರಯತ್ನವನ್ನು ಪಕ್ಷದ ಕಾರ್ಯಕರ್ತರು ಮಾಡಿದರು.

ಜನಸಾಮಾನ್ಯರ ಧ್ವನಿಯಾಗಿ ಆಮ್ ಆದ್ಮಿ ಪಕ್ಷ ಎಂದಿಗೂ ಹೋರಾಡುತ್ತದೆ. ನೀಚ ಸರ್ಕಾರಗಳು ಬೆಲೆ ಇಳಿಸುವ ತನಕ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಅನಿಲ್ ನಾಚಪ್ಪ ತಿಳಿಸಿದರು. ಅಭಿಯಾನದಲ್ಲಿ ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರಾವ್, ಶಿವಕುಮಾರ್ ನಾಯ್ಡು, ಸರವಣ ಸೇರಿದಂತೆ ಅನೇಕ ಮುಖಂಡರುಗಳಾಗು ಕಾರ್ಯಕರ್ತರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ