LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ವೀಣಾ ಸೆರಾವುಗೆ ಎಎಪಿ ಬೆಂಬಲ

ಬೆಂಗಳೂರು:ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ವೀಣಾ ಸೆರಾವು ಅವರು ಸ್ಪರ್ಧೆ ಮಾಡುತ್ತಿದ್ದು, ಆಮ್ ಆದ್ಮಿ ಪಾರ್ಟಿ ಅವರಿಗೆ ಸಂಪೂರ್ಣವಾಗಿ ಬೆಂಬಲ ನೀಡಲಿದೆ ಎಂದು ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್ ಕುಮಾರ್ ಹೇಳಿದರು.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಟ್ಟಣ್ಣ ಅವರು ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದರು, ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಈಗ ಮತ್ತೆ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದು ವಿಪರ್ಯಾಸ ಎಂದರು.

ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ವೀಣಾ ಸೆರಾವು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಆದರೆ ಇಂದು ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅತಿಥಿ ಶಿಕ್ಷಕರ ಸಮಸ್ಯೆ ಇನ್ನೂ ದಾರುಣವಾಗಿದೆ. ಅತಿಥಿ ಶಿಕ್ಷಕರು ಇಂದು 10-15 ಸಾವಿರ ರೂಪಾಯಿ ಸಂಬಳಕ್ಕೆ ಕೆಲಸ ಮಾಡುವಂತಾಗಿದೆ. ಈ ಹಣದಲ್ಲಿ ಸಂಸಾರ ಸಾಕುವುದು ಹೇಗೆ, ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳ ಪರಿಸ್ಥಿತಿ ಕೆಟ್ಟದ್ದಾಗಿದೆ. ಶಿಕ್ಷಕರಿಗಾಗಲೀ, ವಿದ್ಯಾರ್ಥಿಗಳಿಗಾಗಲಿ ಅಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಹೊಸದಾಗಿ ಬಂದಿರುವ ಶಿಕ್ಷಕರಿಗೆ ಪದವೀಧರರ ಕ್ಷೇತ್ರದ ಚುನಾವಣೆ ಇರುವ ಬಗ್ಗೆಯೇ ಗೊತ್ತಿಲ್ಲ. ಚುನಾವಣಾ ಪ್ರಕ್ರಿಯೆ ಬಗ್ಗೆ ಗೊತ್ತಿಲ್ಲ. ಟೀಚರ್ ಕೌನ್ಸಿಲ್‌ ಇಷ್ಟು ವರ್ಷದಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಿಲ್ಲ ಎಂದರು.

ನಾನು ಹಲವು ಶಾಲೆಗಳಿಗೆ ಭೇಟಿ ನೀಡುತ್ತಿದ್ದು ಚುನಾವಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇನೆ. ಹಲವು ಶಾಲೆಗಳಲ್ಲಿ ಶಿಕ್ಷಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಶಿಕ್ಷಕರನ್ನು ನೋಡಿಕೊಳ್ಳುತ್ತಾರೆ, ಆದರೆ ಶಿಕ್ಷಕರನ್ನು ನೋಡಿಕೊಳ್ಳುವುದು ಯಾರು? ಶಿಕ್ಷಕರಿಗೆ ಬರುವ ಸಂಬಳದಲ್ಲಿ ಇಂದು ಜೀವನ ಮಾಡಕ್ಕೆ ಆಗುತ್ತದಾ ಎಂದು ಪ್ರಶ್ನೆ ಮಾಡಿದರು.

ಶಾಸಕರು, ಸಚಿವರು ಕೌಶಲ್ಯ ತರಬೇತಿ ಪಡೆಯುವ ಹೆಸರಿನಲ್ಲಿ ವಿದೇಶ ಪ್ರವಾಸ ಮಾಡುತ್ತಾರೆ. ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ದೇಶಗಳಿಗೆ ನಮ್ಮ ಶಿಕ್ಷಕರನ್ನು ತರಬೇತಿಗೆ ಕಳುಹಿಸಲಿ, ಅಲ್ಲಿಂದ ತರಬೇತಿ ಪಡೆದು ಬಂದವರು, ನಮ್ಮ ಶಿಕ್ಷಕರಿಗೆ ತರಬೇತಿ ಕೊಟ್ಟು ಶಿಕ್ಷಣ ಗುಣಮಟ್ಟ ಸುಧಾರಣೆಯಾಗುತ್ತದೆ, ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ 7ನೇ ವೇತನ ಆಯೋಗ ಜಾರಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಇನ್ನೂ ವೇತನ ಆಯೋಗ ಜಾರಿ ಮಾಡಲು ಯೋಚಿಸುತ್ತಿದೆ. ನಿಮಗೆ ಸಮಸ್ಯೆ ಸರಿಪಡಿಸಲು ಆಗದೇ ಇದ್ದರೆ ಅಧಿಕಾರ ಬಿಟ್ಟು ಹೋಗಿ ಎಂದರು. ನಿವೃತ್ತ ಶಿಕ್ಷಕರಿಗೆ ಆರೋಗ್ಯ ವಿಮೆ ಇಲ್ಲ, ನಾವು ಕಟ್ಟಿರುವ ತೆರಿಗೆಯಲ್ಲಿ ನಿವೃತ್ತ ಶಿಕ್ಷಕರಿಗೆ ವಿಮೆ ಕೊಡುವ ಯೋಗ್ಯತೆ ಇಲ್ಲವಾ ಎಂದರು.

ಶಿಕ್ಷಕರ, ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ನಾನು ಸಿದ್ಧವಾಗಿದ್ದೇನೆ. ಮೊದಲ ಬಾರಿಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಈ ಬಾರಿ ಆರಿಸಿ ಬಂದರೆ, ಶಿಕ್ಷಕರು, ಶಾಲೆಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದರು.

ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್ ಕುಮಾರ್, ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಹಾಗೂ ಎಎಪಿ ಬೆಂಗಳೂರು ಸಂಘಟನಾ ಕಾರ್ಯದರ್ಶಿ ವಿಶ್ವನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ