E-PAPER
20 Nov 2026, 12:17:45 AM|
Gold₹13023/gGold24K ₹13,023/g - 22K ₹11,927/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ನಂಬಿಕೆ, ಸಹಾನುಭೂತಿ ಇದೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ನಂಬಿಕೆ ಮತ್ತು ಸಹಾನುಭೂತಿ ಇದೆ. ನೀವು ಜನರ ಸೇವೆ ಮಾಡುತ್ತಿದ್ದೀರಿ. ಆದರೆ ಬೇಡಿಕೆಗಳ ಬಗ್ಗೆ ಒಂದೇ ದಿನಕ್ಕೆ ತೀರ್ಮಾನ ಮಾಡಲಾಗುವುದಿಲ್ಲ. ಸಂಬಂಧಪಟ್ಟ ಸಚಿವರು, ಸಚಿವ ಸಂಪುಟ ಸಭೆ ಹಾಗೂ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳ ಜೊತೆ ಗುರುವಾರ ಸಭೆ ನಡೆಸಿ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಎಸ್ ಐಆರ್ ಹಾಗೂ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯ ಕೆಲಸ ಮಾಡಿದ್ದಕ್ಕೆ ಯಾವುದೇ ಗೌರವಧನ ಬಂದಿಲ್ಲ ಎಂದು ಆಶಾ ಕಾರ್ಯಕರ್ತೆಯರು ತಿಳಿಸಿದಾಗ “ಸಮೀಕ್ಷಾ ಕಾರ್ಯಗಳಿಗೆ ಬಳಸಿಕೊಂಡು ಮೇಲೆ ಗೌರವಧನ ಕೊಡಬೇಕು. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ" ಎಂದು ಸಿಎಂ ಆಶ್ವಾಸನೆ ನೀಡುವುದರ ಜೊತೆಗೆ ಸರ್ಕಾರದೊಂದಿಗೆ ಸಹಕರಿಸಿ ಪ್ರತಿಭಟನೆ ನಿಲ್ಲಿಸಿ” ಎಂದು ಮನವಿ ಮಾಡಿದರು.

ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ

“ಗೃಹಲಕ್ಷ್ಮಿ ಯೋಜನೆಯಡಿ ಆಶಾ ಕಾರ್ಯಕರ್ತೆಯರನ್ನು ಸೇರಿಸಬಾರದು ಎಂದಾಗ ಅದನ್ನು ನಾವು ಒಪ್ಪದೆ ಯೋಜನೆ ಕೊಟ್ಟಿದ್ದೇವೆ ಉಚಿತ ಬಸ್ಸು, ವಿದ್ಯುತ್ ಕೊಟ್ಟಿದ್ದೇವೆ. ನಿಮ್ಮ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡೇ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನನ್ನ ಮೇಲೆ ವಿಶ್ವಾಸವಿರಲಿ. ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ" ಎಂದು ಹೇಳಿದರು

"ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಪಿಂಚಣಿ ಯೋಜನೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ನೀವುಗಳು ಕೇಂದ್ರ ಸರ್ಕಾರವನ್ನೂ ಕೇಳಬೇಕು. ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ಹೆಚ್ಚಳ ಮಾಡಿಲ್ಲ" ಎಂದರು.

"ರಾಜ್ಯದ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರ ಸೇವೆ ಹಾಗೂ ಅವರ ಆರ್ಥಿಕ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಗೌರವಧನ ಹೆಚ್ಚಳದ ಬೇಡಿಕೆಯನ್ನು ತಳ್ಳಿಹಾಕುವುದಿಲ್ಲ" ಎಂದು ಹೇಳಿದರು.

"ಆಶಾ ಕಾರ್ಯಕರ್ತೆಯರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಶಾ ಕಾರ್ಯಕರ್ತೆಯರ ಯೋಜನೆ ಆರಂಭವಾಯಿತು. ಆಗ ಅವರಿಗೆ ₹200 ನೀಡಲಾಗುತ್ತಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ₹2 ಸಾವಿರ ನೀಡುತ್ತಿದ್ದರೆ, ರಾಜ್ಯ ಸರ್ಕಾರ ₹5 ಸಾವಿರ ನೀಡುತ್ತಿದೆ. ಇದರ ಜತೆಗೆ ರಾಜ್ಯದಿಂದ ₹1 ಸಾವಿರ ಪ್ರೋತ್ಸಾಹಧನವನ್ನೂ ನೀಡಲಾಗುತ್ತಿದೆ. ಕೆಲಸದ ಆಧಾರದ ಮೇಲೆ ಇತರ ಪ್ರೋತ್ಸಾಹಧನ ಸೇರಿ ಒಟ್ಟಾರೆ ಸುಮಾರು 8 ಸಾವಿರ ರೂಪಾಯಿವರೆಗೆ ದೊರೆಯುತ್ತಿದೆ" ಎಂದು ವಿವರಿಸಿದರು.

"ಆಶಾ ಕಾರ್ಯಕರ್ತೆಯರು ತಮ್ಮ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯ ವಾಸ್ತವಿಕತೆ ಹಾಗೂ ಸರ್ಕಾರದ ಆರ್ಥಿಕ ಇತಿಮಿತಿಗಳನ್ನು ಅವರಿಗೆ ವಿವರಿಸಲಾಗಿದೆ. ಇದು ಆಶಾ ಕಾರ್ಯಕರ್ತೆಯರ ಬೇಡಿಕೆಯೊಂದೇ ಅಲ್ಲ, ವಿವಿಧ ವರ್ಗಗಳಿಂದಲೂ ಹಲವು ಬೇಡಿಕೆಗಳಿವೆ" ಎಂದು ತಿಳಿಸಿದರು.

ಪ್ರತಿಭಟನೆ ಹಿಂಪಡೆಯುವ ವಿಶ್ವಾಸವಿದೆ

"ಆಶಾ ಕಾರ್ಯಕರ್ತರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸರ್ಕಾರದಿಂದ ಯಾವ ರೀತಿಯಲ್ಲಿ ನೆರವು ನೀಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇವೆ. ದಯವಿಟ್ಟು ನಿಮ್ಮ ಮನೆಗಳಿಗೆ ತೆರಳಿ ಎಂದು ಮನವಿ ಮಾಡಿದ್ದೇನೆ" ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಇತರೆ ಯಾವ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ ಪ್ರಶ್ನೆಗೆ, "ಅವರು ಒಟ್ಟು ಎಂಟರಿಂದ ಒಂಬತ್ತು ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಎಲ್ಲ ಬೇಡಿಕೆಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು. ಗೃಹ ಸಚಿವರೂ ಈ ವಿಚಾರವಾಗಿ ಮಾತನಾಡಲಿದ್ದಾರೆ. ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ದಟ್ಟಣೆ ನಿಯಂತ್ರಣಕ್ಕೆ ʼನೂತನ ರಸ್ತೆ ಗ್ರಿಡ್ ವ್ಯವಸ್ಥೆʼ : ಸಿಎಂ ಡಿ.ಕೆ.ಶಿವಕುಮಾರ್ʼಬಸವ ಮಂಟಪ’ ಕೃತಿ ವಿವಾದ; ಲೇಖಕ ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಎಫ್‍ಐಆರ್ ದಾಖಲುಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಸಲ್ಲಿಸಿದ್ದ ಅರ್ಜಿ ವಜಾ2,321 ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ರಸ್ತೆಗಳ ವೈಟ್ ಟ್ಯಾಪಿಂಗ್ : ಸಂಪುಟ ತೀರ್ಮಾನ‘ಬಸವ ಮಂಟಪ’ ಕೃತಿ ಮುಟ್ಟುಗೋಲು; ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ : ಸಂಪುಟ ಸಭೆ ನಿರ್ಣಯಸಿಸಿಬಿಗೆ ರೌಡಿ ನಿಗ್ರಹ ದಳ ಎಂದು ಮರುನಾಮಕರಣಎಸಿ ರೂಂನಲ್ಲಿದ್ದ ಹಲವು ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿ ರಾಹುಲ್ ಗಾಂಧಿ ಬೀದಿಗೆ ತಂದಿದ್ದಾರೆ : ವಿನಯ್ ಕುಮಾರ್ ಸೊರಕೆತಾ.ಪಂ, ಜಿ.ಪಂ ಕ್ಷೇತ್ರ ಮೀಸಲು ಅಂತಿಮ ಅಧಿಸೂಚನೆ ಶುಕ್ರವಾರ ಪ್ರಕಟ : ಸಚಿವ ಈಶ್ವರ್ ಖಂಡ್ರೆʼSIRʼ ಅಂತಿಮ ಪಟ್ಟಿ ತಿರಸ್ಕರಿಸಿ ಸಾಮಾಜಿಕ ಪರಿಶೋಧನೆ ನಡೆಸಿ : ಎಸ್‍ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸಂಪುಟ ಸಮ್ಮತಿ : ಸಚಿವ ಈಶ್ವರ್‌ ಖಂಡ್ರೆ