LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆ

ಕೋಲ್ಕತ್ತ: ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್‌ ಬಿಟ್ಟು ತೃಣಮೂಲ ಕಾಂಗ್ರೆಸ್‌ ಸೇರಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ  ಮತ್ತೆ ಕಾಂಗ್ರೆಸ್‌ ತೆಕ್ಕೆಗೆ ಮರಳಿದ್ದಾರೆ.

ಅಭಿಜಿತ್ ಮುಖರ್ಜಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿರುವ ಗುಲಾಮ್ ಅಹ್ಮದ್ ಮಿರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಕಾಂಗ್ರೆಸ್‌ ಸೇರಬೇಕಿತ್ತು ಆದರೆ ಅದು ವಿವಿಧ ಕಾರಣಗಳಿಂದ ಸಾಧ್ಯವಾಗಿರಲಿಲ್ಲ, ಈಗ ಮಾತೃ ಪಕ್ಷಕ್ಕೆ ಮರಳಿದ್ದು ರಾಜಕೀಯದಲ್ಲಿ ಇದು ನನ್ನ ಎರಡನೇ ಜನ್ಮದಿನವಾಗಿದೆ ಎಂದು ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ಶುಭಂಕರ್ ಸರ್ಕಾರ್ ಈ ಕುರಿತು ಮಾತನಾಡಿ ಅಭಿಜಿತ್ ಮುಖರ್ಜಿ ಮರಳಿ ಪಕ್ಷಕ್ಕೆ ಬಂದಿರುವುದು ದೊಡ್ಡ ಹೆಜ್ಜೆಯಾಗಿದೆ. ಬಂಗಾಳದ ಜನರ ಪರವಾಗಿ ಹೋರಾಡಲು ಪಕ್ಷಕ್ಕೆ ಮತ್ತಷ್ಟು ಚೈತನ್ಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.

2012ರ ಉಪಚುನಾವಣೆ ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಜಂಗೀಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಭಿಜಿತ್ ಮುಖರ್ಜಿ ಅವರು ಗೆಲುವು ಸಾಧಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!