LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳು

ಚಂಡೀಗಢ : ಲುಧಿಯಾನದಿಂದ ದೆಹಲಿಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿ ಉರಿದ ಘಟನೆ ಪಂಜಾಬ್‌ನಲ್ಲಿ ನಡೆದಿದೆ.

ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಸೃಷ್ಟಿಯಾಗಿದೆ

ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಸೂಚನೆ ನೀಡಿದ್ದು, ಘಟನೆ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆ ವೇಳೆ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026