LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್ಸಾರ್ಟಿಸಿ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ ಹಾಗೂ ಇತರೆ ಕಾರಣಗಳಿಂದ‌ ಮೃತಪಟ್ಟ (ಹೃದಯಾಘಾತ/ ಕ್ಯಾನ್ಸರ್ , ಸ್ಟ್ರೋಕ್) 16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ರೂ.10 ಲಕ್ಷ ನೀಡಿದರು.

ಸಾರಿಗೆ ಮತ್ತು ಮುಜರಾಯಿ ಸಚಿವರು, ಸಿಬ್ಬಂದಿಗಳ ಅವಲಂಬಿತರನ್ನು ಭೇಟಿ ಮಾಡಿ, ನಿಗಮವು ಕಳೆದ ಎರಡು ತಿಂಗಳ‌ ಹಿಂದಷ್ಟೇ ಪರಿಹಾರ ಮೊತ್ತವನ್ನು ರೂ.3 ಲಕ್ಷದಿಂದ ರೂ.10 ಲಕ್ಷಗಳಿಗೆ ಏರಿಕೆ ಮಾಡಿದ್ದು, ಇದರಿಂದ‌ ಇಂದು 16 ಕುಟುಂಬಗಳಿಗೆ ಆರ್ಥಿಕವಾಗಿ ಸ್ವಲ್ಪ ಹೆಚ್ಚು ಹಣ ದೊರೆಯುವಂತಾಗಿದ್ದು, ಜೀವಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ, ಆದರೂ ಪರಿಹಾರ ಮೊತ್ತವನ್ನು ಸದುಪಯೋಗಪಡಿಸಿಕೊಂಡು ಸುಸೂತ್ರ ಜೀವನ ನಿರ್ವಹಣೆ ಮಾಡುವಂತೆ ತಿಳಿಸಿ ಎಲ್ಲರಿಗೂ ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಸಿಬ್ಬಂದಿಗಳ ಅವಲಂಭಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ.

• ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.

• ಇದುವರೆವಿಗೂ 12 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ.
ಶ್ರೀ ರಾಜೇಶ್ ಡಿ.ಸಿ, ಚಾಲಕ-ಕಂ-ನಿರ್ವಾಹಕ, ಬಿಲ್ಲೆ ಸಂಖ್ಯೆ: 1447, ಅರಕಲಗೂಡು ಘಟಕ, ಹಾಸನ ವಿಭಾಗ, ರವರು ದಿನಾಂಕ: 29.07.2023 ರಂದು ಮೃತಪಟ್ಟಿರುತ್ತಾರೆ. ಮೃತರ ಅವಲಂಭಿತರಿಗೆ ರೂ.1 ಕೋಟಿಗಳ ಅಪಘಾತ ಪರಿಹಾರ ವಿಮಾ ಜೊತೆಗೆ, ಉಪಧನ, ಭವಿಷ್ಯ ನಿಧಿ, ನೌಕರರ ಕುಟುಂಬ ಕಲ್ಯಾಣ ಯೋಜನೆ, ಡಿಆರ್ಬಿಎಫ್ ಹಾಗೂ ಗಂಪು ವಿಮಾ ಯೋಜನೆಯಿಂದ ರೂ.14,19,980/- ಪರಿಹಾರವನ್ನು ನೀಡಲಾಯಿತು.

ಆದರೆ ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಭಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ಜಾರಿಗೆ ಬರುವಂತೆ ರೂ.10 ಲಕ್ಷಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ ಮುಂದುವರೆದ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ನಿಗಮದ ಕುಟುಂಬ ಕಲ್ಯಾಣ ಪರಿಹಾರ ಯೋಜನೆ ಅಡಿಯಲ್ಲಿ ಕಳೆದ ನವೆಂಬರ್ 2023 ಮತ್ತು ಡಿಸೆಂಬರ್ 2023 ರ ಮಾಹೆಗಳಲ್ಲಿ ಮರಣ ಹೊಂದಿದ 16 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ ನ್ನು ವಿತರಿಸಲಾಯಿತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್ಆರ್. ಶ್ರೀನಿವಾಸ್ (ವಾಸು) ರವರು ಕೇಂದ್ರ ಕಛೇರಿಯಲ್ಲಿ ನಿಗಮದ ಸೇವೆಯಲ್ಲಿರುವಾಗ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಭಿತರಿಗೆ ರೂ. 1 ಕೋಟಿ ಪರಿಹಾರ ಮೊತ್ತದ ಚೆಕ್ಕನ್ನು ಹಾಗೂ ಇತರೆ ಕಾರಣಗಳಿಂದ ಮೃತಪಟ್ಟಿದ್ದ 16 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆಯಡಿ ತಲಾ ರೂ. 10 ಲಕ್ಷಗಳು ಹಾಗೂ ಅವರಿಗೆ ನಿಗಮದಿಂದ ಪಾವತಿಸಬೇಕಾದ ಭವಿಷ್ಯನಿಧಿ, ಉಪದನ ಚೆಕ್ಕನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು ಕೆ.ಎಸ್ .ಆರ್.ಟಿ.ಸಿ. ರವರು ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಅತೀ ಶ್ರಮ ಜೀವಿಗಳಾಗಿದ್ದು, ನಿಗಮವು ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವುದನ್ನು ತಿಳಿದು ಬಹಳ ಸಂತೋಷವಾಯಿತು.

ಈ ಯೋಜನೆಗಳ ಅನುಷಾನಕ್ಕಾಗಿ ಸಾರಿಗೆ ಸಚಿವರನ್ನು ಹಾಗೂ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ತಮಗೆ ದೊರೆತಿರುವ ಪರಿಹಾರ ಹಣವನ್ನು ಯಾರಿಗೂ ಕೊಡದೇ ಮುಂದಿನ ಜೀವನ ನಿರ್ವಹಣೆಗಾಗಿ ಸೂಕ್ತವಾಗಿ ವಿನಿಯೋಗಿಸಿ ಕಾಪಾಡಿಕೊಳ್ಳುವಂತೆ ಹಾಗೂ ಅವಲಂಭಿತರಲ್ಲಿ ನೌಕರಿಗೆ ಅರ್ಹರಿರುವವರಿಗೆ ಕಾಲವಿಳಂಬವಿಲ್ಲದೇ ನೌಕರಿಯನ್ನು ಒದಗಿಸಲು ಕ್ರಮ ಜರುಗಿಸಲು ತಿಳಿಸಿ ಎಲ್ಲರಿಗೂ ಶುಭ ಹಾರೈಸಿ, ಕಾರ್ಮಿಕ ಪರವಾದ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಂಡು ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿ.ಅನ್ಬುಕುಮಾರ್, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಡಾ.ನಂದಿನಿದೇವಿ. ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮಾತ್ತು ಜಾಗೃತ), ಕಾರ್ಮಿಕ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ