Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಕ್ರಮ: ರಾಮಲಿಂಗಾರೆಡ್ಡಿ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್‍ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.


ವಿಧಾನ ಪರಿಷತ್ತಿನ ಕಲಾಪದ ವೇಳೆ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡವನ್ನು ವಿಧಿಸಲಾಗಿದೆ.


ಬಸ್ಸುಗಳ ಕಾರ್ಯಕ್ಷಮತೆಯ ಬಗ್ಗೆ ಈಗಾಗಲೇ ಭಾರತ ಸರ್ಕಾರದ ಭಾರೀ ಕೈಗಾರಿಕೆಗಳ ಸಚಿವರಿ ಪತ್ರ ಮುಖೇನ ಮಾಹಿತಿ ಸಲ್ಲಿಸಲಾಗಿದೆ. ಅದರಂತೆ, ದಿನಾಂಕ 06.11.2025 ರಂದು ಭಾರೀ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳಾದ ಡಾ.ಹನೀಫ್ ಖುರೇಷಿ ಅವರ  ಅಧ್ಯಕ್ಷತೆಯಲ್ಲಿ ಎಲೆಕ್ನಿಕ್ ಬಸ್ಸುಗಳ ಎಲ್ಲಾ ಆಚರಣಾದಾರರೊಂದಿಗೆ ಸಭೆ ನಡೆಸಲಾಗಿರುತ್ತದೆ ಹಾಗೂ 45 ದಿನಗಳೊಳಗೆ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.


ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಇದುವರೆಗೆ ಯಾವುದೇ ಎಲೆಕ್ಟ್ರಿಕ್ ಕಾರ್ಯಾಚರಣೆಯಲ್ಲಿ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಬೆಂಗಳೂರು (ನಗರ), ಮಡಿಕೇರಿ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 47 ಎಲೆಕ್ಟ್ರಿಕ್ ಬಸ್ ಗಳು ಕಾರ್ಯಾಚರಣೆಯಲ್ಲಿವೆ. 

ಜನವರಿ-2023 ರಿಂದ ಇಲ್ಲಿಯವರೆಗೆ ಕಾರ್ಯಾಚರಣೆ ಸಮಯದಲ್ಲಿ ಆಕಸ್ಮಿಕವಾಗಿ ವಿವಿಧ ಕಾರಣಗಳಿಂದ ಒಟ್ಟು 477 ಬಾರಿ ಬಸ್ಸುಗಳು ಅವಘಡ ಸಂಭವಿಸಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರ ಮಹಾನಗರ ಸಾರಿಗೆ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 1221 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಯಲ್ಲಿರುತ್ತವೆ.

2023-24 ರಿಂದ ಸೆಪ್ಟೆಂಬರ್-2025 ರವರೆಗೆ ಬ್ಯಾಟರಿ ದೋಷಗಳಿಂದ 14,082 ಬಾರಿ ಹಾಗೂ ಇನ್ನೀತರ ದೋಷದಿಂದ 2049 ಬಾರಿ ಅವಘಾತಕ್ಕೀಡಾಗಿರುತ್ತವೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಂಪನಿಯವರು ಈ ಬಸ್ಸುಗಳನ್ನು ದುರಸ್ತಿಗೊಳಿಸಿ ಆಚರಣೆಗೆ ಒದಗಿಸಿರುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ