Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಹಂತದ ತನಿಖೆ – ಕಾಡಿನಲ್ಲಿ FSL ಶೋಧ

ಮಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ವೇಗ ಪಡೆದುಕೊಂಡಿದ್ದು, 4 ತಿಂಗಳ ಹಿಂದೆ 7 ಅಸ್ಥಿಪಂಜರಗಳು ಪತ್ತೆಯಾಗಿದ್ದ ಬಂಗ್ಲೆಗುಡ್ಡೆ (Dharmasthala Case) ಅರಣ್ಯ ಪ್ರದೇಶಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (FSL Team) ತಂಡ ಭೇಟಿ ನೀಡಿದೆ.

ಮೂರು ಅಧಿಕಾರಿಗಳನ್ನೊಳಗೊಂಡ ಎಫ್‌ಎಸ್‌ಎಲ್ ತಂಡ ಇಂದು ಬೆಂಗಳೂರಿನಿಂದ ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಹಿಂದಿನ ಉತ್ಖನನ ನಡೆದ ಸ್ಥಳದಲ್ಲಿ ಮತ್ತೆ ಪರಿಶೀಲನೆ ಕೈಗೊಳ್ಳಲಾಗಿದೆ. ಜೊತೆಗೆ ಆರೋಪಿ ಪ್ರದೀಪ್ ಕುಲಾಲ್‌ನನ್ನು ಸ್ಥಳಕ್ಕೆ ಕರೆತಂದು ಪುನಃ ಮಹತ್ವದ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಯಾರು ಪ್ರದೀಪ್ ಕುಲಾಲ್?
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರದೀಪ್ ಕುಲಾಲ್ ಬಿಎನ್‌ಎಸ್ ಸೆಕ್ಷನ್ 183 ಅಡಿ ತಪ್ಪೊಪ್ಪಿಗೆ ನೀಡಿದ್ದಾನೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಕಾಡಿನಲ್ಲಿ ಬುರುಡೆ ತೆಗೆದಿದ್ದ ವಿಡಿಯೋದಲ್ಲೂ ಆತ ಕಾಣಿಸಿಕೊಂಡಿದ್ದಾನೆ.

7 ಅಸ್ಥಿಪಂಜರ FSLಗೆ ರವಾನೆ
ಎಸ್‌ಐಟಿ ತಂಡವು 4 ತಿಂಗಳ ಹಿಂದೆ ಬಂಗ್ಲೆಗುಡ್ಡೆ ಅರಣ್ಯದಲ್ಲಿ ನಡೆಸಿದ ಉತ್ಖನನದಲ್ಲಿ ಸೆಪ್ಟೆಂಬರ್ 17ರಂದು 5 ಅಸ್ಥಿಪಂಜರಗಳು ಹಾಗೂ ಸೆಪ್ಟೆಂಬರ್ 18ರಂದು 2 ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಒಟ್ಟು 7 ಅಸ್ಥಿಪಂಜರಗಳನ್ನು ಹೆಚ್ಚಿನ ವೈಜ್ಞಾನಿಕ ಪರಿಶೀಲನೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ FSL ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ಇದಕ್ಕೂ ಮುನ್ನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಅಕ್ರಮ ಶವ ಹೂತ ಪ್ರಕರಣಗಳ ಆರೋಪ ಸಂಬಂಧ ಎಸ್‌ಐಟಿ ತನಿಖೆ ನಡೆಸಿದ್ದು, ನವೆಂಬರ್ 20ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಸಿತ್ತು. ಕೋರ್ಟ್ ಈ ಪ್ರಕರಣದಲ್ಲಿ ಶೀಘ್ರ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ