LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೋರ್ಟ್‌ನಿಂದ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ

ಬೆಂಗಳೂರು : ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

'ಬಾರ್ ಹೆಡೆಡ್ ಗೂಸ್' ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದ ಅಧಿಕಾರಿಗಳು, ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ.ನರಸೀಪುರದ ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಪ್ರಕರಣದ ವಿಚಾರಣೆಯು ನಡೆಯುತ್ತಿದ್ದು, ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.

ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೊಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ದರ್ಶನ್ ಸ್ಪಷ್ಟನೆ ನೀಡಿದ್ದರು. ಬಳಿಕ ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026