LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾಮೀನು ಬಾಂಡ್‌ಗೆ ಸಹಿ ಹಾಕಲು ಆಸ್ಪತ್ರೆಯಿಂದ ತೆರಳಿದ ನಟ ದರ್ಶನ್

ಬೆಂಗಳೂರು : ಜಾಮೀನು ಬಾಂಡ್‌ಗೆ ಸಹಿ ಹಾಕಲು ನಟ ದರ್ಶನ್ ಆಸ್ಪತ್ರೆಯಿಂದ ತೆರಳಿದ್ದಾರೆ. ಈ ಕಾರಣದಿಂದ ಆಸ್ಪತ್ರೆಯಿಂದ ನಟ ಡಿಸ್ಚಾರ್ಜ್ ಎಂಬ ವದಂತಿ ಹರಡಿತ್ತು. ಇದು ಚರ್ಚೆಗೆ ಕಾರಣವಾಗಿತ್ತು. ನಟ ದರ್ಶನ್ ಜಾಮೀನು ಸಿಗುತ್ತಿದ್ದಂತೆ ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಜಾಮೀನು ಸಿಗುತ್ತಿದ್ದಂತೆ ನಟ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಎಂಬ ವದಂತಿ  ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂಬುವುದಾಗಿ ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಈಗ ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಇಂದು ಮಧ್ಯಾಹ್ನ ಪತ್ನಿ ವಿಜಯಲಕ್ಷ್ಮೀ ಹಾಗೂ ಆಪ್ತ ಧನ್ವಿರ್ ಬಂದಿದ್ದು, ಆ ಬಳಿಕ ದರ್ಶನ್‌ ಡಿಸ್ಚಾರ್ಜ್ ಆಗಿ ಕಾರನ್ನು ಏರಿ ನೇರವಾಗಿ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಮನೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಜಾಮೀನು ಸಿಗುತ್ತಿದ್ದಂತೆ ನಟ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬ ವದಂತಿ ಹರಡಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ