LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯಸಭೆ ಪ್ರವೇಶಿಸಲು ಸಜ್ಜಾದ ನಟ ಕಮಲ್ ಹಾಸನ್

ಚೆನ್ನೈ : ನಟ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ರೆಡಿ ಆಗಿದ್ದಾರೆ. ಜೂನ್ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ ಎಂದು ವರದಿಯಾಗಿದೆ.

ಡಿಎಂಕೆ ಬಿಡುಗಡೆ ಮಾಡಿರುವ ಪಟ್ಟಿಯ ಅನುಸಾರ ಸಲ್ಮಾ, ಪಿ. ವಿಲ್ಸನ್, ಎಸ್.ಆರ್. ಶಿವಲಿಂಗಂ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯಂ ಪಕ್ಷಕ್ಕೆ ಒಂದು ಸ್ಥಾನ ನೀಡಲಾಗಿದೆ. ಈ ಪಕ್ಷದಿಂದ ಕಮಲ್ ಹಾಸನ್ ಅವರನ್ನು ಆಯ್ಕೆ ಮಾಡಿರುವುದಾಗಿ ಡಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಜುಲೈ 24 ರಂದು, ತಮಿಳುನಾಡಿನ ಆರು ರಾಜ್ಯಸಭಾ ಸದಸ್ಯರು ನಿವೃತ್ತಿ ಹೊಂದಲಿದ್ದಾರೆ. ರಾಜ್ಯ ಸಭೆಯಲ್ಲಿ ಮಿತ್ರಪಕ್ಷಗಳ ಬಲದ ಆಧಾರದ ಮೇಲೆ, 6 ಸ್ಥಾನಗಳಲ್ಲಿ ಡಿಎಂಕೆ ಸುಲಭವಾಗಿ 4 ಸ್ಥಾನಗಳನ್ನು ಗೆಲ್ಲಬಹುದಾಗಿದೆ. ಆದರೆ ಡಿಎಂಕೆಯ ಪ್ರಮುಖ ವಿರೋಧ ಪಕ್ಷವಾಗಿರುವ ಎಐಎಡಿಎಂಕೆ 2 ಸ್ಥಾನಗಳನ್ನು ಗೆಲ್ಲಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026