LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಕೇಸ್‌ : ದರ್ಶನ್‌ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕಿಡಿ

ಬೆಂಗಳೂರು : ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ ಇದೀಗ ದರ್ಶನ್‌ ಅಭಿಮಾನಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ʻಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಕಾಮೆಂಟ್ಸ್ ಮಾಡೋದರ ಜೊತೆಗೆ ಟ್ರೋಲ್ ಮಾಡಿದ್ರು. ಇದೀಗ ನಟಿ ರಮ್ಯಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

ಮೊದಲ ಪೋಸ್ಟ್‌ನಲ್ಲಿ ʻಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರʼ ಎನ್ನುವ ʻತೆರೆಯ ಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ ಹಿರೋಯಿನ್‌ ರಮ್ಯಾ ಎಂದು ಬರೆಯಲಾಗಿದೆ. ಅಲ್ಲದೇ ರಮ್ಯಾ ಎರಡು ದಿನಗಳ ಹಿಂದೆ ಮಾಡಿದ ಪೋಸ್ಟ್‌ ಇದೆ. ಇದರೊಂದಿಗೆ ʻಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ. ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿʼ ಅಂತ ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026