LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

"ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್"- ವಿವಾದಾತ್ಮಕ ಹೇಳಿಕೆ ನೀಡಿದ ನಟಿ ರಶ್ಮಿಕಾ

ಬೆಂಗಳೂರು : 'ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೆ ಅನಿಸುತ್ತದೆ' ಎಂದು ನಟಿ ರಶ್ಮಿಕಾ ಮಂದಣ್ಣ ಅವರು ಹೇಳಿಕೆ ನೀಡಿದ್ದು, ಇದೀಗ ವಿವಾದ ಸೃಷ್ಟಿಸಿದೆ. ಸದ್ಯ ನಟಿಯ ಈ ಹೇಳಿಕೆ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, "ಕೊಡವ ಸಮುದಾಯದಿಂದ ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ, ನಾನೇ ಫಸ್ಟ್ ಅನ್ನಿಸುತ್ತೆ ಸಿನಿಮಾ ಇಂಡಸ್ಟ್ರಿಗೆ ನಟಿಯಾಗಿ ಬಂದಿರೋದು. ನಮ್ಮ ಸಮುದಾಯದವರು ತುಂಬಾನೇ ಜಡ್ಜ್ ಮಾಡುತ್ತಾರೆ. ನಾನು ಆಡಿಷನ್ ಮಾಡುತ್ತೇನೆ ಎಂದು ನನ್ನ ಕುಟುಂಬದವರಿಗೆ ಹೇಳಿರಲಿಲ್ಲ. ಸಿನಿಮಾ ರಂಗಕ್ಕೆ ಹೋಗುತ್ತೇನೆ ಎಂದು ಕೂಡ ಅವರಿಗೆ ತಿಳಿಸಿರಲಿಲ್ಲ" ಎಂದು ಹೇಳಿದ್ದಾರೆ.

ಈ ವೇಳೆ ಸಂದರ್ಶಕಿ ನೀವೇ ಮೊದಲು ಎಂದು ಜನ ನಿರ್ಧರಿಸಿದ್ದಾರಾ ಎಂದು ಕೇಳಿದಾಗ. ನಟಿ "ಖಂಡಿತ ಕೊಡವ ಸಮುದಾಯದವರು ಇದನ್ನು ನಿರ್ಧರಿಸಿದ್ದಾರೆ" ಎಂದು ತಿಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಶ್ಮಿಕಾ ಅವರು ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ.

ಈ ರೀತಿ ಹೇಳಿಕೆ ನೀಡುವ ಮೂಲಕ ನಟಿ ರಶ್ಮಿಕಾ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗಾಗಲೇ ಕೊಡವ ಸಮುದಾಯದಿಂದ ನಟಿ ಪ್ರೇಮ, ನಿಧಿ ಸುಬ್ಬಯ್ಯಾ, ಹರ್ಷಿಕ ಪೂಣಚ್ಚ, ಶುಭ್ರ ಅಯ್ಯಪ್ಪ ಸೇರಿ ಸಾಕಷ್ಟು ನಾಯಕಿಯರು ಚಿತ್ರರಂಗಕ್ಕೆ ಬಂದಿದ್ದು, ಖ್ಯಾತಿಯನ್ನು ಗಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026