Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಹಸಿರು ಪಟಾಕಿ ಸಿಡಿಸಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ- ಎಡಿಸಿ ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಯಾರಾದ ಹಸಿರು ಪಟಾಕಿಗಳನ್ನು ಬಯಲು ಪ್ರದೇಶದಲ್ಲಿ ಮಾರಾಟ ಮಾಡುವ ಬಗ್ಗೆ ಮತ್ತು ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶ, ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತಿಗೆ ಒಳಪಟ್ಟು, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ಪಟಾಕಿ ಮಾರಾಟ ಮಾಡಬೇಕು ಎಂದು ಹೇಳಿದರು.

 ಹಸಿರು ಪಟಾಕಿ ಬಳಕೆ ಮತ್ತು ಮಾರಾಟ ಕುರಿತಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ದೀಪಾವಳಿ ಹಬ್ಬದ ಸಮಯದಲ್ಲಿ ಮಾರಾಟ ಮಾಡಲಾಗುವ, ತಯಾರಾದ ಹಸಿರು ಪಟಾಕಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಆಸ್ತಿ ಸುರಕ್ಷತೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ, ಜಿಲ್ಲೆಯಲ್ಲಿ ಈಗಾಗಲೇ ಅಧಿಕೃತ ಪರವಾನಗಿ ಹೊಂದಿರುವವರು ಮತ್ತು 2024ನೇ ಸಾಲಿಗೆ ಪರವಾನಗಿ ನವೀಕರಿಸಿಕೊಂಡಿರುವವರು ನಗರ,

ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಇದೇ ಅ.29 ರಿಂದ ನ.03 ರವರೆಗೆ ಬಯಲು ಪ್ರದೇಶಗಳಲ್ಲಿ ಹಂಗಾಮಿ ಶೆಡ್‌ಗಳನ್ನು ಹಾಕಿಕೊಂಡು ಪಟಾಕಿಗಳನ್ನು ಮಾರಾಟ ಮಾಡಲು ಅಧಿಕೃತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಚಿತ್ರದುರ್ಗ ನಗರದ ಹಳೇ ಮಾದ್ಯಮಿಕ ಶಾಲಾ ಮೈದಾನ,

ಹಿರಿಯೂರು ನಗರದ ನೆಹರು ಮೈದಾನ, ಚಳ್ಳಕೆರೆ ನಗರದ ಬಿಸಿ ನೀರು ಮುದ್ದಪ್ಪ ಪ್ರೌಢಶಾಲೆ ಆವರಣ, ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಕನ್ನಡ ಮತ್ತು ಉರ್ದು ಪಾಠಶಾಲೆ ಆವರಣ, ಹೊಸದುರ್ಗ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣ,

ವೀರಭದ್ರಸ್ವಾಮಿ ದೇವಸ್ಥಾನ ಹಾಗೂ ಪೊಲೀಸ್ ಕ್ವಾಟ್ರರ್ಸ್ ಎದುರು ಹೊಸದುರ್ಗ, ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಬಯಲು ಪ್ರದೇಶದಲ್ಲಿ ಹಂಗಾಮಿ ಶೆಡ್‌ಗಳನ್ನು ಹಾಕಿಕೊಂಡು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ.

ಹಂಗಾಮಿ ಶೆಡ್‌ಗಳನ್ನು ಸ್ಥಾಪಿಸುವ ಮುನ್ನ ಪರವಾನಗಿದಾರರು ಸ್ಥಳೀಯ ಸಂಬAಧಪಟ್ಟ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಇವರನ್ನು ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಶೆಡ್‌ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಹಂಗಾಮಿ ಶೆಡ್‌ಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸ್ಥಾಪಿಸಬೇಕು. ಪರವಾನಿಗೆದಾರರು, ಅವರ ಶೆಡ್‌ಗಳಲ್ಲಿ ಸುಲಭವಾಗಿ ಬೆಂಕಿ ಹತ್ತುವ ಇತರೆ ವಸ್ತುಗಳನ್ನು ಇಡಬಾರದು.

ಅಡುಗೆ ಅಥವಾ ಧೂಮಪಾನ ನಿಷೇಧಿಸಿದ ಬಗ್ಗೆ ಫಲಕಗಳನ್ನು ಹಾಕಬೇಕು. ಪರವಾನಿಗೆದಾರರು ಅವರು ಹೊಂದಿರುವ ಅಧಿಕೃತ ಪರವಾನಿಗೆ ಪತ್ರವನ್ನು ಮಾರಾಟ ಸ್ಥಳದಲ್ಲಿ ಇಟ್ಟುಕೊಂಡಿರಬೇಕು ಮತ್ತು ಪರಿಶೀಲನೆಗಾಗಿ ಸಂಬAಧಪಟ್ಟ ಅಧಿಕಾರಿಗಳು ವಿಚಾರಿಸಿದಾಗ ತೋರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಮಾರಾಟಗಾರರು ಸರ್ಕಾರದ ಪರಿಷ್ಕೃತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

 ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಪರಿಸರ ಮತ್ತು ವನ್ಯ ಜೀವಿಗಳ ಸಂರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಟಿ. ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್, ಸಂಚಾಲಕ ಟಿ.ರುದ್ರಮುನಿ, ನಿರ್ದೇಶಕ ಮಧು, ಅಜೇಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ