LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫೆಬ್ರವರಿ 24 ರಿಂದ ಅದ್ದೂರಿ ಕೋಟೆ ಶ್ರೀ ಮಾರಿಕಾಂಬ ಜಾತ್ರೆ 

ಶಿವಮೊಗ್ಗ,ಫೆ .17 : ನಗರದ ಹೆಸರಾಂತ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಫೆಬ್ರವರಿ 24 ರಿಂದ 28 ರವರೆಗೆ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಎಸ್.ಕೆ.ಮರಿಯಪ್ಪ ತಿಳಿಸಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತ ನಾಡಿದ ಅವರು,ಫೆಬ್ರವರಿ 24 ರಂದು ಬೆಳಗಿನ ಜಾವ 5.30 ಕ್ಕೆ ನಗರದ ಗಾಂಧಿಬಜಾರ್‌ನ ದೇವಿಯ ತವರು ಮನೆಯಲ್ಲಿ ಮಂಗಳವಾದ್ಯದೊಂದಿಗೆ ಬಿ.ಬಿ.ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗ ಕುಟುಂಬದವರು ಪೂಜೆಗೆ ಬರುತ್ತಾರೆ. ಆ ಕುಟುಂಬದ ಮುತ್ತೈದೆ ಯರು ಮಂಗಳ ದ್ರವ್ಯಾದಿಗಳೊಂದಿಗೆ ದೇವಿಗೆ ಉಡಿತುಂಬುವ ಮೂಲಕ ಪೂಜೆ ಸಲ್ಲಿಸುತ್ತಾರೆ. ನಂತರ ವಿಶ್ವ ಕರ್ಮ ಸಮಾಜದವರು ಸಾರ್ವಜನಿಕ ವಾಗಿ ಪೂಜೆಯನ್ನು ಆರಂಭಿಸುತ್ತಾರೆ ಎಂದರು.
ಅದೇ ದಿನ ರಾತ್ರಿ 11.00 ಗಂಟೆಯ ವರೆಗೂ ಗಾಂಧಿ ಬಜಾರ್‌ನಲ್ಲಿ ಪೂಜೆಗೆ ಅವಕಾಶವಿರುತ್ತದೆ. ನಂತರ ರಾತ್ರಿ ಉಪ್ಪಾರ ಸಮಾಜದವರು ದೇವಿಯನ್ನು ರಥದಲ್ಲಿ ಕೂರಿಸಿಕೊಂಡು ಮೆರವಣಿಗೆ ಮುಖಾಂತರ ಮಾರಿಗ ದುಗೆಗೆ ತಂದು ಪ್ರತಿಷ್ಟಾಪಿಸುತ್ತಾರೆ. ಈ ನಡುವೆ ಗಂಗಾ ಪರಮೇಶ್ವರಿ ದೇವ ಸ್ಥಾನದಿಂದ ಗಂಗಾ ಪೂಜೆಯೊಂದಿಗೆ ಅಮ್ಮನವರನ್ನು ಮಂಗಳವಾದ್ಯ ದೊಂದಿಗೆ ಎದುರುಗೊಂಡು ಗಂಗಾಮತಸ್ಥ ಸಮಾಜದವರು ಪೂಜೆ ಸಲ್ಲಿಸುತ್ತಾರೆ.
ಫೆಬ್ರವರಿ 25 ಬೆಳಗಿನ ಜಾವ 4 ಗಂಟೆಗೆ ವಿದ್ಯಾನಗರ ಕರಲಹಟ್ಟಿಯ ಹರಿಜನ ಸಮಾಜ ಬಾಂಧವರು ಬೇವಿನ ಉಡುಗೆಯೊಂದಿಗೆ ಆಗಮಿಸಿ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿದ ನಂತರ ಅಮ್ಮನವರನ್ನು ಗದ್ದುಗೆಗೆ ಪ್ರತಿಷ್ಟಾಪಿಸಲಾಗುತ್ತದೆ. ಇದಾದ ನಂತರ ಕುರುಬ ಜನಾಂಗದ ಗುತ್ಯಮ್ಮ ದೇವಾಲಯದ ಅರ್ಚಕರಾದ ಚೌಡಿಕೆ ಕುಟುಂಬದವರು ನೈವೇದ್ಯಮಾಡಿ ಪೂಜೆ ಸಲ್ಲಿಸುತ್ತಾರೆ. ಬುಧವಾರ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ವಾಲ್ಮೀಕಿ ಸಮಾಜದವರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಉಪ್ಪಾರ ಸಮಾಜದವರು, ತದ ನಂತರ ರಾತ್ರಿ 11 ಗಂಟೆಯವರೆಗೆ ಮಡಿವಾಳ ಸಮಾಜದವರು ಸರದಿಯಂತೆ ನಾಲ್ಕು ದಿನಗಳ ಕಾಲ ಅಮ್ಮನವರಿಗೆ ಪೂಜೆ ಸಲ್ಲಿಸುತ್ತಾರೆ ಎಂದು ವಿವರಿಸಿದರು.
ಫೆಬ್ರವರಿ 28 ರ ಶನಿವಾರ ರಾತ್ರಿ 7 ಗಂಟೆಗೆ ದೇವಿಗೆ ಮಹಾ ಮಂಗಳಾರತಿ ಸಲ್ಲಿಸಿದ ನಂತರ ಶ್ರೀ ಮಾರಿಕಾಂಬೆಯ ಉತ್ಸವ ವಿವಿಧ ಜಾನಪದ ತಂಡಗಳ ಮೆರಗಿನೊಂದಿಗೆ ಲಕ್ಷಾಂತರ ಮಂದಿ ಭಕ್ತಾದಿಗಳ ಸಮ್ಮುಖ ದಲ್ಲಿ ಅಮ್ಮನ ವರನ್ನು ವನ ಪ್ರವೇಶಕ್ಕೆ ಕಳುಹಿಸಿಕೊಡುವ ಮೂಲಕ ಜಾತ್ರೆಗೆ ತೆರೆ ಬೀಳುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಎನ್.ಉಮಾಪತಿ, ಕಾರ್ಯದರ್ಶಿ ಗಳಾದ ಎಸ್.ಹನುಮಂತಪ್ಪ, ಬಿ.ಎಂ. ರಾಮಯ್ಯ, ಎಸ್.ಸಿ. ಲೋಕೇಶ್, ಸಹ ಕಾರ್ಯದರ್ಶಿಗಳಾದ ಎ.ಹೆಚ್. ಸುನೀಲ್, ಟಿ.ಎಸ್.ಚಂದ್ರಶೇಖರ್, ಸತ್ಯನಾರಾಯಣ, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST