Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಡಳಿತ ಚತುರ ಎನ್. ಜಯರಾಂಗೆ ನಾಲ್ಕು ಹುದ್ದೆ; ಗುಣಕ್ಕೆ ಸಂದ ಗೌರವ

ಜನ ಜೀವಾಳ  ಜಾಲ: ಬೆಳಗಾವಿ:ಆಡಳಿತ ಒಂದು ಕಲೆ, ಜನರ ಮೇಲೆ ಆಡಳಿತ ನಡೆಸುವುದು ಸ್ವಸ್ಥ ಸಮಾಜ ಮುನ್ನಡೆಸಲು ಎನ್ನುವುದು ದಿಟ. ದಕ್ಷ ಹಾಗೂ ಜನಾನುರಾಗಿ ಆಡಳಿತ ನಡೆಸಿದ ಕಾರಣಕ್ಕೆ ಒಬ್ಬ ಐಎಎಸ್ ಅಧಿಕಾರಿಗೆ ನಾಲ್ಕು ಹೊಸ ಹುದ್ದೆ ಒಲಿದು ಬಂದಿದೆ.

ಹಿರಿಯ ಐಎಎಸ್ ಅಧಿಕಾರಿ ಕಾರ್ಯದರ್ಶಿ ಶ್ರೇಣಿಯಲ್ಲಿರುವ ಎನ್. ಜಯರಾಮ ಅವರಿಗೆ ಮುಖ್ಯಮಂತ್ರಿ ಕಾರ್ಯದರ್ಶಿ, ಕಂದಾಯ ಕಾರ್ಯದರ್ಶಿ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಕಾರ್ಯದರ್ಶಿ ಹಾಗೂ ಬೆಂಗಳೂರು ಜಲಮಂಡಳಿ ಚೇರಮನ್ ಹುದ್ದೆ ನಿಭಾಯಿಸುವ ಮಹತ್ತರ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರ ಸರಕಾರ ನೀಡಿ ಗಮನ ಸೆಳೆದಿದೆ.
ಹಿಂದಿನ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ರಾಜ್ಯದ ಅತಿದೊಡ್ಡ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನಾಲ್ಕೂವರೆ ವರ್ಷ ಸೇವೆ ಸಲ್ಲಿಸಿದ್ದರು ಎನ್. ಜಯರಾಮ.
ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ, ಜಿಲ್ಲಾಧಿಕಾರಿ ಆಗಿ ಜನಾನುರಾಗಿ ಹಾಗೂ ದಕ್ಷ ಆಡಳಿತಗಾರನಾಗಿ ಜಯರಾಮ ಹೆಸರು ಗಳಿಸಿದ್ದರು. ಇಲ್ಲಿಂದ ವರ್ಗವಾಗಿ ಬೆಂಗಳೂರಿಗೆ ಹೋದಾಗಲು ಉತ್ತಮವಾದ ಹುದ್ದೆಗಳನ್ನೇ ಸರಕಾರ ಅವರಿಗೆ ನೀಡಿತ್ತು. ಪ್ರಸ್ತುತ ಸರಕಾರ ಅವರಿಗೆ ಮಹತ್ತರ ಹುದ್ದೆಗಳಲ್ಲಿ ಪೂರ್ಣ ಮತ್ತು ಹೆಚ್ಚುವರಿ ಜವಾಬ್ದಾರಿಯಲ್ಲಿ ನಾಲ್ಕು ಹುದ್ದೆಗಳನ್ನು ನೀಡಿದೆ. ಮುಖ್ಯಮಂತ್ರಿ ಕಾರ್ಯದರ್ಶಿಗೆ ಜಯರಾಮ ನೇಮಕವಾಗುತ್ತಿದ್ದಂತೆ ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಹರ್ಷೋದ್ಘಾರ ಉಂಟಾಗಿದೆ.
ಸಮಸ್ತ ಬೆಳಗಾವಿ ಪತ್ರಕರ್ತರು ಹಾಗೂ ಬೆಳಗಾವಿ ವಾರ್ತಾ ಇಲಾಖೆಯ ಪರವಾಗಿ 'ಜನಜೀವಾಳ' ಅವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ