Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

50 ವರ್ಷಗಳ ಬಳಿಕ ದೇಶದಲ್ಲಿ ಎಡಪಂಥೀಯ ಆಡಳಿತಕ್ಕೆ ಅಂತ್ಯ!

ಹೊಸದಿಲ್ಲಿ, ಮೇ 4 : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ ಸೋಲನುಭವಿಸಿರುವುದರಿಂದ, ಸುಮಾರು 50 ವರ್ಷಗಳ ಬಳಿಕ ಭಾರತದಲ್ಲಿ ಯಾವುದೇ ಎಡಪಂಥೀಯ ಸರಕಾರ ಉಳಿದಿಲ್ಲ.

ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ 2016ರಲ್ಲಿ ಕೇರಳದಲ್ಲಿ ಅಧಿಕಾರಕ್ಕೆ ಬಂದಿದ್ದು, ಅದು ದೇಶದಲ್ಲಿದ್ದ ಕೊನೆಯ ಕಮ್ಯುನಿಸ್ಟ್ ಸರಕಾರವಾಗಿತ್ತು. ಆದರೆ 2026ರ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಮರಳಲು ಸಜ್ಜಾಗಿದ್ದು, ಎಡರಂಗವು ತನ್ನ ಕೊನೆಯ ಅಧಿಕಾರದ ನೆಲೆಯನ್ನು ಕಳೆದುಕೊಂಡಿದೆ.

ಇದರಿಂದ 1997ರ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಕಮ್ಯುನಿಸ್ಟ್ ಪಕ್ಷದ ಮುಖ್ಯಮಂತ್ರಿ ಇರುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಪಶ್ಚಿಮ ಬಂಗಾಳದಲ್ಲಿ 1977ರಿಂದ 2011ರವರೆಗೆ 34 ವರ್ಷಗಳ ಕಾಲ ಎಡಪಂಥೀಯ ಆಡಳಿತ ಮುಂದುವರಿದಿತ್ತು. 2011ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರಕ್ಕೆ ಬಂದ ಬಳಿಕ ಅದಕ್ಕೆ ಅಂತ್ಯವಾಯಿತು. ತ್ರಿಪುರಾದಲ್ಲಿಯೂ 1993ರಿಂದ 2018ರವರೆಗೆ ಎಡರಂಗ ಆಡಳಿತ ನಡೆಸಿದ್ದು, ಬಳಿಕ ಬಿಜೆಪಿ ಅದನ್ನು ಸೋಲಿಸಿತ್ತು.

2009ರ ಲೋಕಸಭಾ ಚುನಾವಣೆಯ ನಂತರದಿಂದ ಎಡರಂಗವು ಭಾರತೀಯ ರಾಜಕೀಯದಲ್ಲಿ ತನ್ನ ನೆಲೆಯನ್ನು ಕ್ರಮೇಣ ಕಳೆದುಕೊಳ್ಳುತ್ತ ಬಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ