LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂಕ್ರಾಂತಿ ಬಳಿಕ ನಂದಿನಿ ಹಾಲಿನ‌ ದರ 5 ರೂ. ಏರಿಕೆ ಫಿಕ್ಸ್

ಬೆಂಗಳೂರು: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST