LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತ

ಪ್ರಯಾಗ್​ರಾಜ್: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದ್ದು, ಹರಿಹರಾನಂದ ಸ್ವಾಮೀಜಿಯು ಉಳಿದುಕೊಂಡಿದ್ದ ಟೆಂಟ್​ನಲ್ಲಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು ಎನ್ನಲಾಗಿದೆ. ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಘಟನೆವು ಓಲ್ಡ್ ಜಿಟಿ ರಸ್ತೆಯ ತುಳಸಿ ಛೇದಕ ಬಳಿ ನಡೆಯುತ್ತಿದ್ದ ಶಿಬಿರದಲ್ಲಿ ನಡೆದಿದೆ ಎಂದು ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ.

ಸ್ಥಳದಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡ ತಲುಪಿದ್ದು, ಬೆಂಕಿಗೆ ಕಾರಣವೇನೆಂಬುದರ ಕುರಿತು ತನಿಖೆ ನಡೆಯುತ್ತಿದೆ. ಇದರ ಮೊದಲೇ ಎರಡು ಬಾರಿ ಅಗ್ನಿ ಅವಘಡಗಳು ಸಂಭವಿಸಿದ್ದವು. ಅಲ್ಲದೆ, ಕೆಲವು ದಿನಗಳ ಹಿಂದೆ ಕಾಲ್ತುಳಿತಗೊಂಡು 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್‌ಗಳು ಸಕ್ರಿಯ; ಬಿಎಸ್‌ಎಫ್ ಕಟ್ಟೆಚ್ಚರ