LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಮದ್ಯದ ಬೆಲೆ ಏರಿಕೆ?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮದ್ಯದ ದರ ಹೆಚ್ಚಿಸಲು ಚಿಂತನೆ ನಡೆದಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು.

ಇದೀಗ ಮತ್ತೆ ದರ ಹೆಚ್ಚಳ ಮಾಡುವ ಬಗ್ಗೆ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಲಾಗಿದೆ. ಹೆಚ್ಚುವರಿ ಗುರಿಯನ್ನು ತಲುಪಲು ಮದ್ಯದ ಬೆಲೆ ಏರಿಸುವುದು ಅನಿವಾರ್ಯ ಎನ್ನಲಾಗಿದೆ.2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 38,500 ಕೋಟಿ ರೂ. ಟಾರ್ಗೆಟ್ ನೀಡಲಾಗಿತ್ತು.

ಕಳೆದ ಬಾರಿಯ ಟಾರ್ಗೆಟ್‌ನಲ್ಲಿ 36,500 ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ ಕೋಟಿ ರೂ. ಟಾರ್ಗೆಟ್ ನೀಡಲಾಗಿದೆ. ಈ ಸಾಲಿನಲ್ಲಿ ಹೆಚ್ಚುವರಿಯಾಗಿ 1400 ಕೋಟಿ ರೂ. ಸಂಗ್ರಹವಾಗಬೇಕಿದ್ದು, ಇದಕ್ಕಾಗಿ ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ.ಬಜೆಟ್​ನಲ್ಲಿ ಮದ್ಯದ ದರ ಏರಿಕೆ ಮಾಡಿದರೆ ಟೀಕೆ, ಪ್ರತಿಭಟನೆ ಎದುರಿಸಬೇಕಾಗುತ್ತದೆ.

ಹೀಗಾಗಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 3,500 ಕೋ. ರೂ. ಹೆಚ್ಚುವರಿ ರಾಜಸ್ವ ಸಂಗ್ರಹದ ಗುರಿ ನೀಡುವ ಪರೋಕ್ಷವಾಗಿ ಬೆಲೆ ಏರಿಕೆ ಮಾಡಿದ್ದಾರೆ. ಹೆಚ್ಚುವರಿ ಟಾರ್ಗೆಟ್​ ನೀಡಿದರೆ ಯಾವಾಗ ಬೇಕಾದರೂ ಬೆಲೆ ಏರಿಕೆ ಮಾಡಬಹುದು ಎನ್ನುವುದು ಸರ್ಕಾರದ ಪ್ಲ್ಯಾನ್. ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ಅಬಕಾರಿ ಇಲಾಖೆ ಮದ್ಯದ ಬೆಲೆ ಏರಿಕೆ ಮಾಡುವ ಸಾಧ್ಯತೆಗಳಿವೆ.

ಬಹುತೇಕ ಏಪ್ರಿಲ್‌ನಲ್ಲಿ ಏರಿಕೆಯಾಗಬಹುದು ಎನ್ನಲಾಗುತ್ತಿದೆ.ವಿಸ್ಕಿ, ಬ್ರ್ಯಾಂಡಿ, ರಮ್ ಹಾಗೂ ಜಿನ್ ಸೇರಿದಂತೆ ಎಲ್ಲ ರೀತಿಯ ಮದ್ಯದ ಬೆಲೆ ಹೆಚ್ಚಾಗಲಿದೆ. ಪ್ರತಿ ಬ್ರ್ಯಾಂಡ್ ಮೇಲೆ 5ರಿಂದ 20 ರೂ.ವರೆಗೆ ಹೆಚ್ಚಿಸಲು ಚಿಂತನೆ ನಡೆದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!