LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಪರೇಷನ್ ಅಖಾಲ್ ಅಡಿಯಲ್ಲಿ ಇಂದು ಮತ್ತೆ ಮೂವರು ಉಗ್ರರ ಎನ್‌ಕೌಂಟರ್

ಜಮ್ಮು ಮತ್ತು ಕಾಶ್ಮೀರ : ಭಯೋತ್ಪಾದನಾ ನಿಗ್ರಹ ಕೈಗೊಂಡ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಸೈನಿಕರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

ಭಾರತೀಯ ಸೇನೆಯು ಆಪರೇಷನ್ ಅಖಾಲ್ ಅಡಿಯಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಾಚರಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಇದೀಗ ಭಾನುವಾರ ಕೂಡ ಮೂವರು ಉಗ್ರರನ್ನು ಸದಬಡಿಯಲಾಗಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ರಾತ್ರಿಯಿಡೀ ಸ್ಫೋಟಗಳು ಮತ್ತು ಗುಂಡಿನ ಸದ್ದುಗಳು ಕೇಳಿಬರುತ್ತಿದ್ದವು. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ತಂಡ ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ.

ಶುಕ್ರವಾರ, ಅಖಾಲ್ ಅರಣ್ಯದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಕಾಡಿನಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರ ಗುಂಪೊಂದು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಉಗ್ರರನ್ನು ಎನ್‌ಕೌಂಟರ್ ಮಾಡಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026