Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಗಸಗಿ ದೇವಸ್ಥಾನ ಪಂಚರು, ಪೊಲೀಸ್ ಪಾಟೀಲರಾದ ಬಸನಗೌಡ ನಿಂಗನಗೌಡ ಪಾಟೀಲ ನಿಧನ.

ಅಗಸಗಿ ದೇವಸ್ಥಾನ ಪಂಚರಾದ ಬಸನಗೌಡ ನಿಂಗನಗೌಡ ಪಾಟೀಲ ನಿಧನ.

ಬೆಳಗಾವಿ : ಅಗಸಗಿ ಗ್ರಾಮದ ದೇವಸ್ಥಾನ ಪಂಚರು, ಊರಿನ ಗೌಡರು ಹಾಗೂ ಪ್ರತಿಷ್ಠಿತ ಪೊಲೀಸ್ ಪಾಟೀಲ ಮನೆತನದ ಹಿರಿಯರಾದ ಬಸನಗೌಡ ನಿಂಗನಗೌಡ ಪಾಟೀಲ ಇಂದು ಸಾಯಂಕಾಲ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರಿಗೆ 77 ವರ್ಷ ವಯಸ್ಸಾಗಿತ್ತು. 

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿ , ಇಬ್ಬರು ಸಹೋದರರು, ಸೊಸೆಯಂದಿರು, ಅಳಿಯಂದಿರು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.

ಮೃತರು ಗ್ರಾಮದ ಪೊಲೀಸ್ ಪಾಟೀಲರಾಗಿದ್ದು, ಗ್ರಾಮದ ಧಾರ್ಮಿಕ ,ಸಾಮಾಜಿಕ, ರಾಜಕೀಯ ಹಾಗೂ ಇತರೆ ಕಾರ್ಯಗಳಲ್ಲಿ ಪ್ರಮುಖರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದಾ ಸಾಮಾಜಿಕ ಕಳಕಳಿಯ ಉದ್ದೇಶಕ್ಕಾಗಿ ಶ್ರಮಿಸುವ ಕುಟುಂಬದ ಹಿರಿಯ ಜೀವಿಯಾಗಿದ್ದರು. ಕಿರಿಯ ಸಹೋದರ ಗ್ರಾಮ ಪಂಚಾಯತಿ ಸದಸ್ಯರು, ಮಾಜಿ ಅಧ್ಯಕ್ಷರಾಗಿದ್ದು,  ಹಿರಿಯ ಪುತ್ರ ಅಗಸಗಿ ಪ್ರೌಢಶಾಲೆಯಲ್ಲಿ ಸಿಬ್ಬಂದಿಯಾಗಿ, ಕಿರಿಯ ಪುತ್ರ ಕರ್ನಾಟಕ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಮುಂದಿನ ವರ್ಷ ನಡೆಯಲಿರುವ ಗ್ರಾಮದ ಲಕ್ಷ್ಮೀದೇವಿ ಜಾತ್ರೆಯ ಸಿದ್ಧತೆಗಾಗಿ ಬಸನಗೌಡ ಪಾಟೀಲ ಹಗಲಿರುಳು ಶ್ರಮಿಸುತ್ತಿದ್ದ ಇವರು ಹೃದಯಾಘಾತಕ್ಕೆ  ಬಲಿಯಾಗಿ ಮಂಗಳವಾರ ಸಂಜೆ ನಿಧನರಾದರು.

ಮೃತರ ಅಂತ್ಯಕ್ರಿಯೆ ನಾಳೆ (ಬುಧವಾರ ದಿ: 5 ಜುಲೈ) ಬೆಳಗ್ಗೆ 9 ಗಂಟೆಗೆ ಅಗಸಗಿ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ನೆರವೇರಲಿದೆ.

ಮೃತರ ಅಗಲಿಕೆಗೆ ಅಗಸಗಿ , ಚಲವೇನಟ್ಟಿ, ಮಾಳೆನಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಕಂಬನಿ ಮಿಡಿಯುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ