LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಪ್ರಶಸ್ತಿ ಕಾರ್ಯಕ್ರಮ: ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ



ಕೊಪ್ಪಳ ಜುಲೈ 22  ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪಧೆðಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಪ್ರಶಸ್ತಿ ಕಾರ್ಯಕ್ರಮವು ಚಾಲ್ತಿ ಯೋಜನೆಯಾಗಿದ್ದು, ಸರ್ಕಾರಿ ಆದೇಶದನ್ವಯ 2025-26ನೇ ಸಾಲಿನಲ್ಲಿಯೂ ಮುಂದುವರಿಸಲಾಗಿದ್ದು, ಕೃಷಿ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. K-Kisan Portal ರಡಿ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ /ನಾಗರಿಕ ಸೇವಾ ಕೇಂದ್ರ/ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ (Farmer’s Identification Number) ಯನ್ನು ಬಳಸಿಕೊಂಡು ಆನ್‌ಲೈನ್‌ ಮೂಲಕ ಆಗಷ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮುಂಗಾರು ನೀರಾವರಿ ಭತ್ತ ಹಾಗೂ ಮುಂಗಾರು ಮಳೆಯಾಶ್ರಿತ ಶೇಂಗಾ, ತೊಗರಿ ಪೂರ್ಣ ಬೆಳೆ, ಮುಸುಕಿನ ಜೋಳ, ನವಣೆ ಮತ್ತು ಸಜ್ಜೆ ಬೆಳೆಗಳನ್ನು ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಆಯ್ಕೆ ಮಾಡಲಾಗಿರುತ್ತದೆ.

ಈ ಹಿಂದೆ ಕೃಷಿ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವಯಲ್ಲಿರುವ ಯಾವುದೇ ಇಲಾಖೆ, ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಆದರೆ ಕೃಷಿ ಮತ್ತು ಕೃಷಿ ಸಂಬಂಧಿತವಾದ ಜಲಾನಯನ ಅಭಿವೃದ್ದಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆ, ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ ನೌಕರರು ಮತ್ತು ಅವರ ಕುಟುಂಬವರ್ಗದವರನ್ನು ಹೊರತುಪಡಿಸಿ ಈ ಇಲಾಖೆಗಳಲ್ಲಿನ ನಿವೃತ ತಾಂತ್ರಿಕೇತರ ನೌಕರರು ಮತ್ತು ಈ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ನಿವೃತ್ತ ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸಬಹುದಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು