LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ಕೃಷಿ ವಿವಿ ಸುಸ್ಥಿರ ಕೃಷಿ, ಗ್ರಾಮೀಣ ಅಭಿವೃದ್ಧಿ, ನವೀಕರಿಸಬಹುದಾದ ಇಂಧನದ ಮೂಲಗಳ ಉತ್ತೇಜಿಸಲು ಒಡಂಬಡಿಕೆ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಹಾಗೂ ಹೋಂಡಾ ಟ್ರೇಡಿಂಗ್ ಕಾರ್ಪೊರೇಷನ್ ಇಂಡಿಯಾ ಪ್ರೈ. ಲಿಮಿಟೆಡ್, ಸಹಯೋಗದೊಂದಿಗೆ ಇಂದು ಜೈವಿಕ ಇಂಧನ ಅಭಿವೃದ್ಧಿ ಹಾಗೂ ಕೃಷಿ ಬಯೋಮಾಸ್ ಬಳಕೆಯ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.

ಈ ಒಡಂಬಡಿಕೆಯು ಸೂರ್ಯಕಾಂತಿ ಹೈಬಿಡ್ ಬೀಜಗಳ ಉತ್ಪಾದನೆ, ಕೃಷಿ ಸಮುದಾಯಗಳನ್ನು ಒಳಗೊಂಡ ಜೈವಿಕ ಇಂಧನ ಪೂರೈಕೆ ಸರಪಳಿ ಅಭಿವೃದ್ಧಿ, ಮಣ್ಣಿನ ಸಾವಯವ ಇಂಗಾಲವನ್ನು ಹೆಚ್ಚಿಸಲು ಬಯೋಚಾರ್ ಉತ್ಪಾದನೆಗೆ ಕೃಷಿ ಬಯೋಮಾಸ್ಸ್ ತ್ಯಾಜ್ಯವನ್ನು ಬಳಸುವುದು ಮತ್ತು ಕೃಷಿ ಉಪಕರಣಗಳ ಪೂರೈಕೆಯ ಉಪಕ್ರಮಗಳನ್ನು ಒಳಗೊಂಡಿದೆ.

ಈ ಒಡಂಬಡಿಕೆಯು ಸುಸ್ಥಿರ ಕೃಷಿ, ಗ್ರಾಮೀಣ ಅಭಿವೃದ್ಧಿ ಮತ್ತು ನವೀಕರಿಸಬಹುದಾದ ಇಂಧನದ ಮೂಲಗಳನ್ನು ಉತ್ತೇಜಿಸಲು ಸಾರ್ವಜನಿಕ – ಖಾಸಗಿ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ: ಎಸ್.ವಿ.ಸುರೇಶ ಅವರಿಗೆ ಹೋಂಡಾಟ್ರೇಡಿಂಗ್ ಕಾರ್ಪೊರೇಷನ್ ಇಂಡಿಯಾ ಪ್ರೈ. ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರು ಕೋಜಿ ಸೈತೋಹ್, ತೋಷಿಮಿಟ್ಸು ಸುಡಾ, ಕೆಂಟಾ ಮಿಜುಟಾನಿ, ಶ್ರೀಮತಿ ಅಂಜನಾ ಮುಖಿಜಾ ಮತ್ತು ಆಶ್ವಿನಿ ಅವರು ಒಡಂಬಡಿಕೆ ಪತ್ರವನ್ನು ಹಸ್ತಾಂತರಿಸಿದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ