LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ

ಅಹಮದಾಬಾದ್‌: ಇಲ್ಲಿ ಕಳೆದ ಗುರುವಾರ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 215 ಮಂದಿಯ ಗುರುತು ಪತ್ತೆಯಾಗಿದ್ದು, 198 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ.

ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್‌ ಆಗಿವೆ. 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತು ಕೆನಡಿಯನ್‌ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ. 15 ಮೃತದೇಹಗಳನ್ನು ಏರ್‌ ಅಂಬುಲೆನ್ಸ್‌ ಹಾಗೂ 183 ಮೃತದೇಹಗಳನ್ನು ರೋಡ್‌ ಅಂಬುಲೆನ್ಸ್‌ ಮೂಲಕ ಸಾಗಿಸಲಾಗಿದೆ. ಇದೆಲ್ಲವೂ ಸೇರಿ ಒಟ್ಟಾರೆ 222 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. 8 ಮಂದಿ ಮೃತದೇಹಗಳ ಗುರುತು ಮಾತ್ರ ಪತ್ತೆಯಾಗಿಲ್ಲ ಎಂದು ವಿವರಿಸಿದ್ದಾರೆ.



ಪತನವಾಗಿರುವ ಏರ್‌ ಇಂಡಿಯಾ ಬೋಯಿಂಗ್-787 ವಿಮಾನದ ಬ್ಲ್ಯಾಕ್‌ಬಾಕ್ಸ್‌ ಅನ್ನು ಡಿಕೋಡ್‌ ಮಾಡಲು ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜೂನ್‌ 13ರಂದು ಬಿಜೆ ಮೆಡಿಕಲ್‌ ಹಾಸ್ಟೆಲಿನ ಮೇಲ್ಛಾವಣಿಯಲ್ಲಿದ್ದ ಏರ್‌ ಇಂಡಿಯಾ ವಿಮಾನದ ಬ್ಲ್ಯಾಕ್‌ಬಾಕ್ಸನ್ನು‌ ವಿಮಾನ ಅಪಘಾತ ತನಿಖಾ ಬ್ಯೂರೋ ವಶಪಡಿಸಿಕೊಂಡಿತ್ತು. ಆದ್ರೆ ಬ್ಲ್ಯಾಕ್‌ಬಾಕ್ಸ್‌ಗೆ ಬೆಂಕಿ ಬಿದ್ದು ಹಾನಿಯಾಗಿದೆ. ಇದರಿಂದ ಸ್ಥಳೀಯ ತನಿಖಾಧಿಕಾರಿಗಳಿಂದ ಮಾಹಿತಿ ಹೊರ ತೆಗೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಡೇಟಾ ರಿಕವರಿಗಾಗಿ ಬ್ಲ್ಯಾಕ್‌ಬಾಲಕ್ಸನ್ನು ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026