LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಹಮದಾಬಾದ್ ವಿಮಾನ ದುರಂತ: 215 ಡಿಎನ್‌ಎ ಮ್ಯಾಚ್; 198 ಮೃತದೇಹ ಹಸ್ತಾಂತರ

ಅಹಮದಾಬಾದ್ : "ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಈವರೆಗೆ ಡಿಎನ್‌ಎ ಹೊಂದಾಣಿಕೆ ಮೂಲಕ ಒಟ್ಟು 215 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 198 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ" ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ಮಾಹಿತಿ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್ ಆಗಿವೆ. ಈ ಪೈಕಿ 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್, 32 ಬ್ರಿಟಿಷ್ ಮತ್ತಿ ಕೆನಡಿಯನ್ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ" ಎಂದು ತಿಳಿಸಿದ್ದಾರೆ.

"15 ಮೃತದೇಹಗಳನ್ನು ಏರ್ ಅಂಬುಲೆನ್ಸ್ ಹಾಗೂ 183 ಮೃತದೇಹಗಳನ್ನು ರೋಡ್ ಅಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಇದೆಲ್ಲವೂ ಸೇರಿ ಒಟ್ಟಾರೆ 222 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. 8 ಮಂದಿ ಮೃತದೇಹಗಳ ಗುರುತು ಮಾತ್ರ ಪತ್ತೆಯಾಗಿಲ್ಲ" ಎಂದು ಹೇಳಿದ್ದಾರೆ.

ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸಂಪೂರ್ಣ ಸುಟ್ಟು ಕರಕಲಾಗಿವೆ. ಮತ್ತು ರುಂಡ-ಮುಂಡ, ಕೈ-ಕಾಲುಗಳು ಬೇರೆ ಬೇರೆಯಾಗಿ ಛಿದ್ರವಾಗಿದೆ. ಆದ್ದರಿಂದ ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026