LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಹಮದಾಬಾದ್ ವಿಮಾನ ದುರಂತ: 87 ಶವಗಳ ಗುರುತು ಪತ್ತೆ; 47 ಮೃತದೇಹ ಹಸ್ತಾಂತರ

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ರಾಜಸ್ಥಾನ ಮತ್ತು ಗುಜರಾತ್‌ನ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸಂಪೂರ್ಣ ಸುಟ್ಟು ಕರಕಲಾಗಿವೆ. ಮತ್ತು ರುಂಡ-ಮುಂಡ, ಕೈ-ಕಾಲುಗಳು ಬೇರೆ ಬೇರೆಯಾಗಿ ಛಿದ್ರವಾಗಿದೆ. ಆದ್ದರಿಂದ ಅಧಿಕಾರಿಗಳು ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ. ಮೃತಪಟ್ಟವರ ಸಂಬಂಧಿಕರು ಸಿವಿಲ್ ಆಸ್ಪತ್ರೆಗೆ ಬಂದು ತಮ್ಮ ಡಿಎನ್‌ಎ ನಮೂನೆಗಳನ್ನು ನೀಡಿ ಆಸ್ಪತ್ರೆಯ ಆವರಣದಲ್ಲಿ ನಾಲ್ಕು ದಿನದಿಂದ ಕಾಯುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026