Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

CWC ಸಭೆಯಲ್ಲಿ ಹಿರಿಯ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

ಚಂದ್ರವಳ್ಳಿ ನ್ಯೂಸ್, ಹೊಸದಿಲ್ಲಿ:
ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಸಭೆ ನಡೆಸಿದ್ದ ಸ್ಥಳವನ್ನು ಹಿಂದೂಪರ ಸಂಘಟನೆಗಳು 'ಶುದ್ಧೀಕರಣ' ಗೊಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ, ಸ್ವಪಕ್ಷದ ಹಿರಿಯ ನಾಯಕರೇ ತಮ್ಮ ಬೆಂಬಲಕ್ಕೆ ನಿಲ್ಲದೆ ಮೌನಕ್ಕೆ ಶರಣಾಗಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಈ ವಿಷಯವನ್ನು ಉಲ್ಲೇಖಿಸಿದ ಅವರು, ಪಕ್ಷದ ನಾಯಕರ ನಡವಳಿಕೆಯಿಂದ ತಮಗಾಗಿರುವ ನೋವನ್ನು ಬಹಿರಂಗವಾಗಿಯೇ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ವಿವರ ಹಾಗೂ ನಾಯಕರ ಮೌನ:
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಖರ್ಗೆಯವರ ಸಾರ್ವಜನಿಕ ಸಭೆ ಮುಗಿದ ಬಳಿಕ ಕೆಲವು ಸಂಘಟನೆಗಳು ಆ ಜಾಗವನ್ನು ಶುದ್ಧೀಕರಣಗೊಳಿಸಿದ್ದವು. ಈ ಕೃತ್ಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದರು. ಆದರೆ, ಈ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಬಹಿರಂಗವಾಗಿ ತಮ್ಮ ಬೆಂಬಲಕ್ಕೆ ಬಾರದಿರುವುದು ಅವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ.

ಕೆಸಿ ವೇಣುಗೋಪಾಲ್ ಪ್ರತಿಕ್ರಿಯೆ: ಸಭೆಯ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, "ಸ್ಥಳ ಶುದ್ಧೀಕರಣಗೊಳಿಸಿದ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. CWC ಸಭೆಯಲ್ಲಿ ಈ ಕುರಿತು ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ" ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸ್ಪಷ್ಟನೆ: ರಾಜ್ಯಸಭೆಯಲ್ಲಿ ಖರ್ಗೆ ಅವರು ಈ ವಿಷಯ ಎತ್ತಿದಾಗ ಸಭಾಪತಿ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ವಿಷಾದ ವ್ಯಕ್ತಪಡಿಸಿದ್ದರು. ಈ ಕೃತ್ಯಕ್ಕೂ ಬಿಜೆಪಿ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ, ಬಲಪಂಥೀಯ ಸಂಘಟನೆಗಳ ಈ ನಡವಳಿಕೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಬಿಜೆಪಿ ಅಂತರ ಕಾಯ್ದುಕೊಂಡಿತ್ತು. 

ರಾಜ್ಯಸಭೆಯಲ್ಲಿ ಖರ್ಗೆ ಹೇಳಿದ್ದೇನು?:
"
ನಾನು ದಲಿತ, ನನ್ನನ್ನು ರಕ್ಷಿಸಿ ಎಂದು ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಹೋರಾಡುವ ಶಕ್ತಿ ನನಗಿದೆ. ಆದರೆ, ಈ ರೀತಿಯ ಅಸ್ಪೃಶ್ಯತೆಯ ನಡವಳಿಕೆ ನನಗೆ ತೀವ್ರ ಬೇಸರ ತಂದಿದೆ. ಇದು ನನಗೆ ಮಾಡಿದ ಅವಮಾನ. ಈ ಕೃತ್ಯ ಎಸಗಿದವರ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಬಂಧಿಸಬೇಕು" ಎಂದು ಮಲ್ಲಿಕಾರ್ಜುನ ಖರ್ಗೆ ಸದನದಲ್ಲಿ ಗುಡುಗಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ