LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ 7 ಮಂದಿ ಅಸ್ವಸ್ಥ: ವಿಷಾಹಾರ ಸೇವನೆ ಶಂಕೆ

ಮುಂಬೈ : ಲಂಡನ್‌ನ ಹೀಥ್ರೂನಿಂದ ಮುಂಬೈಗೆ ಸೋಮವಾರ ಹೊರಟಿದ್ದ ಏರ್ ಇಂಡಿಯಾ ವಿಮಾನ AI-130 ರಲ್ಲಿ ಐವರು ಪ್ರಯಾಣಿಕರು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ತಲೆತಿರುಗುವಿಕೆ ಮತ್ತು ವಾಕರಿಕೆಯಂತಹ ಲಕ್ಷಣಗಳಿಂದ ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ.

ವಿಷಾಹಾರ ಸೇವನೆಯೇ ಇದಕ್ಕೆ ಕಾರಣ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಶಂಕಿಸಿದ್ದಾರೆ. ಈ ಘಟನೆಯ ಬಗ್ಗೆ ಪ್ರಸ್ತುತ ತನಿಖೆ ನಡೆಯುತ್ತಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (ಆಉಅಂ) ಮಾಹಿತಿ ನೀಡಲಾಗಿದೆ.

"ಲಂಡನ್ ಹೀಥ್ರೂದಿಂದ ಮುಂಬೈಗೆ ಹೊರಟಿದ್ದ AI-130 ವಿಮಾನದಲ್ಲಿ, ಐದು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗೆ ಹಾರಾಟದ ವಿವಿಧ ಹಂತಗಳಲ್ಲಿ ತಲೆತಿರುಗುವಿಕೆ ಮತ್ತು ವಾಕರಿಕೆ ಬಂದಿರುವುದಾಗಿ ವರದಿಯಾಗಿದೆ. ವಿಮಾನವು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು. ಅಲ್ಲಿ ವೈದ್ಯಕೀಯ ತಂಡಗಳು ತಕ್ಷಣದ ನೆರವು ನೀಡಲು ಸಿದ್ಧವಾಗಿದ್ದವು. ವಿಮಾನ ಇಳಿದ ನಂತರ, ಇಬ್ಬರು ಪ್ರಯಾಣಿಕರು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿ ಅಸ್ವಸ್ಥರಾಗಿದ್ದರಿಂದ ಅವರನ್ನು ಹೆಚ್ಚಿನ ಪರೀಕ್ಷೆಗಾಗಿ ವೈದ್ಯಕೀಯ ಕೋಣೆಗೆ ಕರೆದೊಯ್ಯಲಾಯಿತು ಮತ್ತು ನಂತರ ಬಿಡುಗಡೆ ಮಾಡಲಾಯಿತು" ಎಂದು ಏರ್ ಇಂಡಿಯಾ ಸೋಮವಾರ ರಾತ್ರಿ ತಿಳಿಸಿದೆ.

ಏಳು ವ್ಯಕ್ತಿಗಳಿಗೆ ಹಠಾತ್ ಅನಾರೋಗ್ಯ ಕಾಣಿಸಿಕೊಂಡಿರುವುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026