LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಶ್ವರ್ಯ ಗೌಡ ಕೇಸ್​: ಮಾಜಿ ಸಂಸದ ಡಿಕೆ ಸುರೇಶ್​ಗೆ ಇಡಿ ಸಮನ್ಸ್​

ಬೆಂಗಳೂರು : ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಮಾಜಿ ಸಂಸದ ಡಿಕೆ ಸುರೇಶ್​ ಅವರ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿಬಂದಿತ್ತು. ಐಶ್ವರ್ಯ ಗೌಡ ಹೇಳಿಕೆ ಮತ್ತು ಸಾಕ್ಷಿಗಳನ್ನು ಆಧರಿಸಿ ಇಡಿ ಗುರುವಾರ (ಜೂ.19) ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಡಿಕೆ ಸುರೇಶ್​ ಅವರಿಗೆ ಸೂಚನೆ ನೀಡಿದೆ. ಜೂ.23ರಂದು ವಿಚಾರಣೆಗೆ ಹಾಜರಾಗುವುದಾಗಿ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಇಡಿ ಸಮನ್ಸ್​ ನೀಡಿರುವ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್​ ಮಾತನಾಡಿ, ಇಡಿ ಅಧಿಕಾರಿಗಳಿಂದ ನನಗೆ ಸಮನ್ಸ್ ಬಂದಿರುವುದು ನಿಜ. ಐಶ್ವರ್ಯಾಗೌಡ ಜೊತೆ ಯಾವುದೇ ಹಣದ ವ್ಯವಹಾರ ಮಾಡಿಲ್ಲ. ಜೂ.19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೆ, ಜೂ.23ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದೇನೆ. ಎರಡು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರಿಂದ ನಾನು ಭಾಗಿಯಾಗಬೇಕಾಗಿದೆ ಎಂದು ಹೇಳಿದರು.

ನನ್ನ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆಂದು ದೂರು ಕೊಟ್ಟಿದ್ದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್​ ಕಮಿಷನರ್​ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಇಡಿ ಅಧಿಕಾರಿಗಳು ಏಳೆಂಟು ದಾಖಲೆಗಳು ಬೇಕು ಎಂದಿದ್ದಾರೆ. ಇಡಿ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026