LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಕೈ‌ಬಿಡುವಂತೆ ಅಜಿತ್ ದೋವಲ್ ಒತ್ತಾಯ

ನವದೆಹಲಿ: ಉಗ್ರವಾದವನ್ನು ಎದುರಿಸುವ ವಿಚಾರದಲ್ಲಿ ದ್ವಂದ್ವ ನೀತಿಯನ್ನು ಕೈ ಬಿಡಬೇಕು ಎಂದು ಶಾಂಘೈ ಸಹಕಾರ ಸಂಸ್ಥೆಯ ಸದಸ್ಯರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಒತ್ತಾಯಿಸಿದ್ದಾರೆ.

ಬೀಜಿಂಗ್‌ನಲ್ಲಿ ನಡೆದ ಎಸ್‌ಸಿಒ ಭದ್ರತಾ ಮಂಡಳಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಉಗ್ರವಾದಕ್ಕೆ ಸಂಬಂಧಿಸಿದ ಹಾಗೆ ಅದರ ಅಪರಾಧಿಗಳು ಮತ್ತು ಅವರಿಗೆ ಸಹಕಾರ ನೀಡುವವರನ್ನೇ ಹೊಣೆ ಮಾಡಬೇಕು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗಾಗಲೇ ಪಟ್ಟಿ ಮಾಡಿರುವ ಉಗ್ರ ಗುಂಪುಗಳಿಂದ ಬರುವ ನಿರಂತರ ಬೆದರಿಕೆಗಳ ಬಗೆಯೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಉಗ್ರವಾದದ ಬಗ್ಗೆ ಇರುವ  ದ್ವಿಮುಖ ಮಾನದಂಡಗಳನ್ನು ದೂರವಿಡುವ ಅಗತ್ಯತೆಯ ಬಗೆಗೂ ಅವರು ಒತ್ತಿ ಹೇಳಿದ್ದಾರೆ.

ಯಾವುದೇ ಭಯೋತ್ಪಾದಕ ಕೃತ್ಯವಿರಲಿ ಅದು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಗಡಿಯಾಚೆಗಿನ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರು, ಪ್ರಾಯೋಜಕರನ್ನೇ ಇಂತಹ ಕೃತ್ಯಗಳಿಗೆ ಹೊಣೆಮಾಡುವ ಮತ್ತು ಅವರನ್ನು ಕಾನೂನಿನ ಮುಂದೆ ತರುವುದಕ್ಕೆ ಸಹಕಾರ ನೀಡಲು SCO ಸದಸ್ಯರನ್ನು ಅವರು ಒತ್ತಾಯಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026