ಆಕಾಶವಾಣಿ: ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಫೆ.28 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೊಮಾ / ಪತ್ರಿಕೋದ್ಯಮ / ಸಮೂಹ ಮಾಧ್ಯಮದಲ್ಲಿ ಪದವಿ ಅಥವಾ ಯಾವುದೇ ಪದವಿಯೊಂದಿಗೆ ಮಾಧ್ಯಮದಲ್ಲಿ ಎರಡು ವರ್ಷಗಳ ಅನುಭವ. ವಯೋಮಿತಿ 24 ರಿಂದ 50 ವರ್ಷ (ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ ಸರಿಯಾಗಿ), ಅರ್ಜಿದಾರರು ಅರ್ಜಿ ಸಲ್ಲಿಸುವ ಜಿಲ್ಲೆಯ ಜಿಲ್ಲಾ ಕೇಂದ್ರದ ನಿವಾಸಿಯಾಗಿರಬೇಕು. ಅಥವಾ ಕೇಂದ್ರದಿಂದ 10 ಕಿ.ಮೀ. ಒಳಗಿನ ನಿವಾಸಿಯಾಗಿರಬೇಕು. ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್‍ನಲ್ಲಿ ಜ್ಞಾನ ಹೊಂದಿರಬೇಕು. ಸುದ್ದಿ ಸಂಗ್ರಹಕ್ಕೆ ಬೇಕಾದ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಅಗತ್ಯ.
ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಇದೇ ಫೆಬ್ರವರಿ 28 ರೊಳಗೆ ತಲುಪುವಂತೆ The Deputy Director General (E) , (Attn: Regional News Unit), Akashvani, Raj Bhavan Road, Bengaluru 560 001 ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 – 22356344 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.