LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆ

ಉತ್ತರ ಪ್ರದೇಶದ: ಪ್ರಯಾಗ್‌ ರಾಜ್‌ನಲ್ಲಿ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಕನ್ನೌಜ್ ಕ್ಷೇತ್ರದ ಸಂಸದ ಅಖಿಲೇಶ್ ಯಾದವ್ , ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಅಂಕಿಅಂಶಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು ಮತ್ತು ಸರ್ವಪಕ್ಷ ಸಭೆಗೆ ಕರೆ ನೀಡಿದರು.

ಸರ್ಕಾರ ನಿರಂತರವಾಗಿ ಬಜೆಟ್ ಅಂಕಿಅಂಶಗಳನ್ನು ನೀಡುತ್ತಿರುವಾಗ, ದಯವಿಟ್ಟು ಮಹಾಕುಂಭದಲ್ಲಿ ಮೃತಪಟ್ಟವರ ಅಂಕಿಅಂಶಗಳನ್ನು ಸಹ ನೀಡಿ. ಮಹಾಕುಂಭದ ವ್ಯವಸ್ಥೆಗಳ ಬಗ್ಗೆ ಸ್ಪಷ್ಟೀಕರಣ ನೀಡಲು ಸರ್ವಪಕ್ಷ ಸಭೆ ಕರೆಯಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಮಹಾಕುಂಭ ದುರ್ಘಟನೆಯಲ್ಲಿ ಮೃತಪಚ್ಚವರ ಅಂಕಿಅಂಶಗಳು, ಗಾಯಾಳುಗಳ ಚಿಕಿತ್ಸೆ, ಔಷಧಿಗಳು, ವೈದ್ಯರ ಲಭ್ಯತೆ, ಆಹಾರ, ನೀರು ಮತ್ತು ಸಾರಿಗೆ ವಿವರಗಳನ್ನು ಸಂಸತ್ತಿನಲ್ಲಿ ಮಂಡಿಸಬೇಕು ಎಂದು ಒತ್ತಾಯಿಸಿದರು. ಕಾಲ್ತುಳಿತ ಘಟನೆಗೆ ಹೊಣೆಯಾಗುವವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಯಾವುದೇ ತಪ್ಪು ನಡೆದಿಲ್ಲದಿದ್ದರೆ ಸರ್ಕಾರ ಅಂಕಿಅಂಶಗಳನ್ನು ಏಕೆ ಮುಚ್ಚಿಡುತ್ತಿದೆ ಎಂದು ಪ್ರಶ್ನಿಸಿದರು.

ಮಹಾ ಕುಂಭಮೇಳ ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಸತ್ಯವನ್ನು ಮರೆಮಾಚುವವರನ್ನು ಶಿಕ್ಷಿಸಬೇಕು. ಯಾವುದೇ ಅಪರಾಧವಿಲ್ಲದಿದ್ದರೆ, ಡಬಲ್ ಎಂಜಿನ್ ಸರ್ಕಾರ ಏಕೆ ಕಾಲ್ತುಳಿತದ ಬಗ್ಗೆ ನಿಖರ ಮಾಹಿತಿ ನೀಡುತ್ತಿಲ್ಲ, ಅಂಕಿಅಂಶಗಳನ್ನು ಏಕೆ ಮರೆಮಾಚುತ್ತಿದೆ ಎಂದು ಕೇಳಿದರು.

ಉತ್ತರ ಪ್ರದೇಶ ಸರ್ಕಾರ ಒದಗಿಸಿದ ಅಂಕಿಅಂಶಗಳ ಪ್ರಕಾರ, ಜನವರಿ 29 ರಂದು ಮಹಾಕುಂಭದಲ್ಲಿ ಮೌನಿ ಅಮವಾಸ್ಯೆಯ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಜನರು ಗಾಯಗೊಂಡಿದ್ದಾರೆ.ನಿನ್ನೆ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದರು, ಕೇಂದ್ರ ಸರ್ಕಾರ ಮೃತಪಟ್ಟವರ ಬಗ್ಗೆ ನಿಖರ ಮಾಹಿತಿ ನೀಡಬೇಕು. ದುರಂತದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕೆಂದು ಎಂದು ಸಾಮೂಹಿಕವಾಗಿ ಒತ್ತಾಯಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿಸ್ಟಾರ್ ಕಿಡ್ ಐಎಎಸ್‌ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ  ಮನವಿ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025...!ವಚನ.: -ಮಾದಾರ ಧೂಳಯ್ಯ.!