LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ಕಾ ಕೆಫೆ: ಶುಚಿ-ರುಚಿ ಆಹಾರಕ್ಕೆ ಒತ್ತು-ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

 

ಚಿತ್ರದುರ್ಗ: ಅಕ್ಕಾ ಕೆಫೆ ನಿರ್ವಹಣೆಗೆ ಸ್ವ ಸಹಾಯ ಗುಂಪು ಆಯ್ಕೆ ಮಾಡಲು ಚಿತ್ರದುರ್ಗ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗುರುವಾರ ಆಹಾರ ಸಿದ್ದಪಡಿಸುವ ಸ್ಪರ್ಧೆ ನಡೆಯಿತು.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಕಟ್ಟಡದ ನಿರ್ಮಾಣ ಪೂರ್ಣಗೊಳಿಸಲಾಗಿದ್ದು, ಈ ಅಕ್ಕಾ ಕೆಫೆ ನಿರ್ವಹಣೆಗೆ ಸ್ವ ಸಹಾಯ ಗುಂಪನ್ನು ಆಯ್ಕೆ ಮಾಡಲು ಆಹಾರ ಸಿದ್ದಪಡಿಸುವ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಅನುಭವವಿರುವ ಮೂರು ಸ್ವ-ಸಹಾಯ ಗುಂಪುಗಳು ಭಾಗವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್  ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಪರಿಶೀಲಿಸಿ ಆಹಾರ ಸಿದ್ದಪಡಿಸಿರುವ ವಿಧಾನ, ಗುಣಮಟ್ಟ, ರುಚಿ-ಶುಚಿ-ನೈರ್ಮಲ್ಯ, ಆಹಾರ ತಯಾರಿಸಲು ಉಪಯೋಗಿಸಿದ ಪದಾರ್ಥಗಳನ್ನು ಪರಿಶೀಲಿಸಿ, ಸ್ವ-ಸಹಾಯ ಸಂಘದ ಮಹಿಳೆಯರು ಸಿದ್ಧಪಡಿಸಿದ ಆಹಾರದ ರುಚಿ, ಗುಣಮಟ್ಟ  ಪರಿಶೀಲನೆ ನಡೆಸಿದರು.

ಅಕ್ಕ ಕೆಫೆ ನಿರ್ವಹಣೆಗೆ ಸ್ವ ಸಹಾಯ ಗುಂಪಿನ ಆಯ್ಕೆಯಲ್ಲಿ ಶುಚಿ-ರುಚಿ ಆಹಾರಕ್ಕೆ ಒತ್ತು ನೀಡಬೇಕು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಆಹಾರ ಸುರಕ್ಷತಾ ಅಧಿಕಾರಿ ನಂದಿನಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ರುಡ್‍ಸೆಟ್ ಸಂಸ್ಥೆ ನಿರ್ದೇಶಕ ಬಸವರಾಜ್, ಎನ್‍ಆರ್‍ಎಲ್‍ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಯೋಗೇಶ್ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026