LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆ: ಮುಖ್ಯ ಆಯುಕ್ತರು

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯನ್ನು ಭಾರತ ಚುನಾವಣಾ ಆಯೋಗವು ಈಗಾಗಲೇ ಘೋಷಿಸಿದ್ದು, ಅದರಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರ ವರು ಮಾಹಿತಿ ನೀಡಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಸಂಬಾಂಗಣ-01ರಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ಶಿಕ್ಷಕರ ಉಪ ಚುನಾವಣೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

23 ಜನವರಿ 2024 ರಂದು ಅಧಿಸೂಚನೆ ಹೊರಡಿಸಿ 30 ಜನವರಿ 2024 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 31 ಜನವರಿ 2024 ರಂದು ನಾಮಪತ್ರಗಳ ಪರಿಶೀಲನೆ, 2 ಫೆಬ್ರವರಿ 24 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯದಿನವಾಗಿದ್ದು, 16 ಫೆಬ್ರವರಿ 24 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. 20 ಫೆಬ್ರವರಿ 24 ರಂದು ಮತ ಎಣಿಕೆ ನಡೆಯಲಿದ್ದು, 23 ಫೆಬ್ರವರಿ 24 ರಂದು ಚುನಾವಣಾ ಪ್ರಕ್ರಿಯೆ ಕೊನೊಗೊಳ್ಳಲಿದೆ ಎಂದು ತಿಳಿಸಿದರು.

ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 11763 ಮತದಾರರಿದ್ದು, ಹೊಸದಾಗಿ ಬಂದಿರುವ 1048 ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ನಕಲಿರುವ(Duplication) 97 ಮತಗಳನ್ನು ಕಾನೂನು ರೀತಿಯಲ್ಲಿ ತೆಗೆಯಲು ಕ್ರಮ ಕೈಗೊಳ್ಳಲಾಗುವುದು. ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ 34 ಮತಗಟ್ಟೆಗಳಿರಲಿವೆ ಎಂದು ಹೇಳಿದರು.

ಮಾದರಿ ನೀತಿ ಸಂಹಿತೆ ಜಾರಿ:

ಮಾದರಿ ನೀತಿ ಸಂಹಿತೆಯು ಭಾರತ ಚುನಾವಣೆ ಆಯೋಗದಿಂದ ಶಿಕ್ಷಕರ ಚುನಾವಣೆಯನ್ನು ಘೋಷಣೆ ಮಾಡಿರುವ ದಿನ(16-01-2024)ದಿಂದ ಜಾರಿಗೆ ಬರಲಿದ್ದು, 23 ಫೆಬ್ರವರಿ 2024 ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವ ದಿನ ನೀತಿ ಸಂಹಿತೆಯು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ರಾಜಕೀಯ ಪ್ರತಿನಿಧಿಗಳ ಜೊತೆ ಸಭೆ:

ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಅಗತ್ಯ ಮಾಹಿತಿ ನೀಡಲಾಯಿತು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಆರ್ ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ಶ್ರೀ ದಯಾನಂದ್, ಶ್ರೀಮತಿ ಸ್ನೇಹಲ್, ಶ್ರೀಮತಿ ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆ