Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪೊಲೀಸರ ಮೇಲೆ ಹಲ್ಲೆ ಆರೋಪ: ರಾಹುಲ್‌, ಪ್ರಿಯಾಂಕಾ ವಿರುದ್ಧ ಮತ್ತೊಂದು ಎಫ್‌ಐಆರ್

ಹೊಸದಿಲ್ಲಿ, ಅ. 8: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಬುಧವಾರ (ಅ. 7) ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಲವು ಮುಖಂಡರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ. ಹಲ್ಲೆ ಆರೋಪ ಹಾಗೂ ಪ್ರತಿಭಟನಾಕಾರರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನೆಯ ವೇಳೆ ಸಂಸದರು, ರಾಜಕೀಯ ನಾಯಕರು ಸೇರಿದಂತೆ ಒಟ್ಟು 91 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು.

ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯನ್ನು ಹಿಂಪಡೆಯಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಮತ್ತು ಕಾರ್ಯಕರ್ತರು ಬುಧವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು.

ಜನಪಥದಿಂದ ಜಂತರ್‌ ಮಂತರ್‌ನತ್ತ ಬಸ್‌ನಲ್ಲಿ ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಘರ್ಷಣೆ ಉಂಟಾಗಿತ್ತು. ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಮಹಿಳಾ ನಾಯಕಿಯರು ಸಂವಿಧಾನದ ಪ್ರತಿಗಳನ್ನು ಹಿಡಿದು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದರು. ಬಳಿಕ ಪೊಲೀಸರು ಅವರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದರು.

ಇದಕ್ಕೂ ಮುನ್ನ ಅಕ್ಟೋಬರ್ 6ರಂದು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಅನುಮತಿಯಿಲ್ಲದೆ ಆಕಾಶವಾಣಿ ಭವನ ಪ್ರವೇಶಿಸಿದ ಆರೋಪದಲ್ಲಿ ರಾಹುಲ್, ಪ್ರಿಯಾಂಕಾ ಸೇರಿದಂತೆ ಹಲವರ ವಿರುದ್ಧ ಬುಧವಾರ ಪ್ರತ್ಯೇಕ ಎಫ್‌ಐಆರ್ ದಾಖಲಾಗಿತ್ತು.

ಹೀಗಾಗಿ ಎಸ್‌ಐಆರ್‌ ವಿರುದ್ಧದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಸತತ ಎರಡನೇ ದಿನವೂ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲಿನ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ