ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಬದಿಯಲ್ಲಿ ನಿಂತು ಪುರುಷರನ್ನು ಆಕರ್ಷಿಸಲು ಯತ್ನಿಸುತ್ತಿದ್ದ ಮಹಿಳೆಯರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಪಾಸ್‌ಪೋರ್ಟ್ ಹಾಗೂ ವೀಸಾ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಲಾಗಿದೆ.